ಮಂಗಳವಾರ, ಮಾರ್ಚ್ 9, 2021
18 °C

‘ತಲೆಗೆ ಪೆಟ್ಟಾಗುವುದರಿಂದ ಹೆಚ್ಚಿನ ಸಾವು’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ತಲೆಗೆ ಪೆಟ್ಟಾಗುವುದರಿಂದ ಹೆಚ್ಚಿನ ಸಾವು’

ಬೆಂಗಳೂರು: ‘ಜಗತ್ತಿನೆಲ್ಲೆಡೆ ಅಪಘಾತ ಅಥವಾ ಅಪರಾಧ ಚಟುವಟಿಕೆಗಳ ಸಂದರ್ಭದಲ್ಲಿ ತಲೆಗೆ ಗಾಯವಾಗಿ ಸಾವನ್ನಪ್ಪುವವರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ’ ಎಂದು ಬಿಜಿಎಸ್‌ ಗ್ಲೋಬಲ್‌ ಆಸ್ಪತ್ರೆಯ ಉಪಾಧ್ಯಕ್ಷ ಡಾ.ಎನ್‌.ಕೆ.ವೆಂಕಟರಮಣ ತಿಳಿಸಿದರು.‘ವಿಶ್ವ ತಲೆ ಗಾಯ ಜಾಗೃತಿ ದಿನ’ದ ಅಂಗವಾಗಿ ನಗರ ಸಂಚಾರ ಪೊಲೀಸ್‌ ವಿಭಾಗ ಮತ್ತು ಬಿಜಿಎಸ್‌ ಗ್ಲೋಬಲ್‌ ಆಸ್ಪತ್ರೆಯ ಸಹಯೋಗದಲ್ಲಿ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.‘ಜಾಗತಿಕವಾಗಿ ಅಪರಾಧ ಕೃತ್ಯ ಮತ್ತು ಅಪಘಾತಗಳ ಸಂದರ್ಭದಲ್ಲಿ ತಲೆಗೆ ಪೆಟ್ಟಾಗಿ ಪ್ರತಿ ವರ್ಷ ಸುಮಾರು 12 ಲಕ್ಷ ಜನ ಸಾವನ್ನಪ್ಪುತ್ತಿದ್ದಾರೆ. ಅದೇ ರೀತಿ 50 ಲಕ್ಷ ಮಂದಿ ಶಾಶ್ವತವಾಗಿ ಅಂಗವಿಕಲರಾಗುತ್ತಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ ಅಪಘಾತಗಳಲ್ಲಿ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗಿದೆ’ ಎಂದು ಹೇಳಿದರು.ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್‌ ಕಮಿಷನರ್‌ ಬಿ.ದಯಾನಂದ ಮಾತನಾಡಿ, ‘ವಾಹನ ಸವಾರರು ಸುರಕ್ಷಿತ ಚಾಲನೆಯ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು. ಬೈಕ್‌ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಬೇಕು. ಪಾನಮತ್ತರಾಗಿ ವಾಹನ ಚಾಲನೆ ಮಾಡಬಾರದು’ ಎಂದು ಸಲಹೆ ನೀಡಿದರು.ರಸ್ತೆ ಅಪಘಾತ ಅಥವಾ ಅಪರಾಧ ಚಟುವಟಿಕೆಗಳ ಸಂದರ್ಭದಲ್ಲಿ ಗಾಯಗೊಳ್ಳುವ ವ್ಯಕ್ತಿಗಳಿಗೆ ಪ್ರಥಮ ಚಿಕಿತ್ಸೆ ನೀಡುವ ಬಗ್ಗೆ ವೆಂಕಟರಮಣ ಅವರು ಪ್ರಾತ್ಯಕ್ಷಿಕೆ ಮೂಲಕ ಪೊಲೀಸ್‌ ಸಿಬ್ಬಂದಿಗೆ ಮಾಹಿತಿ ನೀಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.