ಭಾನುವಾರ, ಜೂನ್ 20, 2021
26 °C

‘ನಾನು ಕೂಡ ಬಿಜೆಪಿ ಟಿಕೆಟ್‌ ಆಕಾಂಕ್ಷಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಲೋಕಸಭಾ ಚುನಾವಣೆ ಯಲ್ಲಿ ಚಿತ್ರದುರ್ಗದಿಂದ ಸ್ಪರ್ಧೆ ಮಾಡುವುದಾಗಿ ಛಲವಾದಿ ಮಹಾಸಂಸ್ಥಾನ ಮಠದ ಬಸವನಾಗಿ ದೇವ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾಮಾಣಿಕತೆ, ಭ್ರಷ್ಟಾಚಾರ ಇಲ್ಲದೆ ಸೇವೆ ಸಲ್ಲಿಸುವ ಪಕ್ಷದಿಂದ ಸ್ಪರ್ಧಿಸಲು ತೀರ್ಮಾನಿಸಿದ್ದು, ಸದ್ಯಕ್ಕೆ ಬಿಜೆಪಿ ಮುಖಂಡರಲ್ಲಿ ಟಿಕೆಟ್ ನೀಡುವಂತೆ ಮನವಿ ಮಾಡಿರುವುದಾಗಿ ತಿಳಿಸಿದರು.ಬಿಜೆಪಿ ವರಿಷ್ಠರು ಈಚೆಗೆ ದಾವಣಗೆರೆಯಲ್ಲಿ ನಡೆದ ಸಮಾವೇಶದಲ್ಲಿ ಜನಾರ್ದನಸ್ವಾಮಿ ಅವರಿಗೆ ಟಿಕೆಟ್‌ ನೀಡುವುದಾಗಿ ಘೋಷಿಸಿರುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇನ್ನೂ ಯಾರಿಗೆ ಟಿಕೆಟ್‌ ನೀಡಬೇಕು ಎಂಬ ನಿರ್ಧಾರವಾಗಿಲ್ಲ ಎಂದು ಉತ್ತರಿಸಿದರು.ಛಲವಾದಿ ಗುರುಪೀಠದ ಪೀಠಾಧ್ಯಕ್ಷನಾಗಿ ಧಾರ್ಮಿಕ ಕಾರ್ಯದ ಜತೆಯಲ್ಲಿ ರಾಜಕೀಯವಾಗಿ ಜನಸೇವೆ ಮಾಡುವ ಉದ್ದೇಶದಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ತೀರ್ಮಾನ ಕೈಗೊಂಡಿದ್ದು,  ಸ್ಪರ್ಧೆ ಖಚಿತ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.