ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನಾನು ಯುವಿ ಅಭಿಮಾನಿ’

Last Updated 17 ಮೇ 2016, 19:30 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ):  ಯುವರಾಜ್ ಸಿಂಗ್ ನನ್ನ ಅಚ್ಚುಮೆಚ್ಚಿನ ಆಟಗಾರ ಎಂದು ಮುಂಬೈ ಇಂಡಿಯನ್ಸ್ ತಂಡದ ಆಲ್‌ರೌಂಡರ್ ಕೃಣಾಲ್ ಪಾಂಡ್ಯ ಹೇಳಿದ್ದಾರೆ.
ವಿಶಾಖಪಟ್ಟಣದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್ ಎದುರು ಅಬ್ಬರದ 86 ರನ್ (37ಎಸೆತ) ಗಳಿಸಿದ್ದ ಎಡಗೈ ಬ್ಯಾಟ್ಸ್‌ಮನ್ ಕೃಣಾಲ್, ‘ನಾನು   ಬಹಳಷ್ಟು ಪಂದ್ಯಗಳಲ್ಲಿ ಯುವರಾಜ್ ಸಿಂಗ್ ಅವರ ಆಟವನ್ನು ವೀಕ್ಷಿಸಿದ್ದೇನೆ. ನಾನು ಅವರ ಬಹುದೊಡ್ಡ ಅಭಿಮಾನಿ’ ಎಂದಿದ್ದಾರೆ.

‘ನನ್ನ ಆಟದಿಂದ ತಂಡವು ಭರ್ಜರಿ ಗೆಲುವು ದಾಖಲಿಸಿರುವುದು ಸಂತಸ ತಂದಿದೆ. ನಮ್ಮ ಆಟವು ತಂಡದ ಜಯಕ್ಕೆ ಕಾರಣವಾದರೆ ಅದಕ್ಕಿಂತ ದೊಡ್ಡ ತೃಪ್ತಿ ಮತ್ತು ಸಂತಸ ಮತ್ತೊಂದಿಲ್ಲ’ ಎಂದರು.

ಯುವರಾಜ್ ಸಿಂಗ್ ಅವರು ಐಪಿಎಲ್‌ನಲ್ಲಿ ಸನ್‌ರೈಸರ್ಸ್‌ ಹೈದರಾ ಬಾದ್ ತಂಡದಲ್ಲಿ ಆಡುತ್ತಿದ್ದಾರೆ. ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ  ಕೃಣಾಲ್‌ ಗಮನ ಸೆಳೆಯುತ್ತಿರುವ ಆಟಗಾರ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT