ಬುಧವಾರ, ಜನವರಿ 29, 2020
30 °C

‘ಪಡಿತರ ಚೀಟಿ ವಿತರಣೆ ವಿಳಂಬ ಸಲ್ಲ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ತಾಲ್ಲೂಕಿನಲ್ಲಿ ಪಡಿತರ ಚೀಟಿ ವಿತರಣೆ ಪ್ರಕ್ರಿಯೆ ಮಂದಗತಿ ಯಲ್ಲಿ ಸಾಗಿದ್ದು, ಆಹಾರ ಮತ್ತು ನಾಗ ರಿಕ ಸರಬರಾಜು ಇಲಾಖೆ ಅಧಿಕಾರಿಗಳು ಸಮರ್ಪಕವಾಗಿ ಕೆಲಸ ನಿರ್ವಹಿಸುತ್ತಿಲ್ಲ ಎಂದು ವಿಧಾನ ಪರಿಷತ್ತಿನ ಸದಸ್ಯ ಸೈಯದ್‌ ಮುದೀರ್‌ ಆಘಾ ಅಸಮಾ ಧಾನ ವ್ಯಕ್ತಪಡಿಸಿದರು.ನಗರಸಭೆಯ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಅಧಿ ಕಾರಿಗಳ ಜತೆ ಪರಿಶೀಲನಾ ಸಭೆ ನಡೆಸಿದ ಅವರು, ಪಡಿತರ ಚೀಟಿ ಸರಿಯಾಗಿ ವಿತರಣೆಯಾಗದಿದ್ದರೆ ಸರ್ಕಾರದ ‘ಅನ್ನ ಭಾಗ್ಯ’ ಯೋಜನೆ ಅರ್ಹರನ್ನು ತಲುಪು ವುದಿಲ್ಲ ಎಂದು ದೂರಿದರು.ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿ ಮಾತನಾಡಿ, ತಾಲ್ಲೂಕಿನಲ್ಲಿ ಇಲ್ಲಿಯವರೆಗೆ 3,864 ಜನರಿಗೆ ಪಡಿತರ ಚೀಟಿ ವಿತರಿಸಲಾಗಿದೆ. ನಗರ ವ್ಯಾಪ್ತಿಯಲ್ಲಿ 1,162 ಹಾಗೂ ಗ್ರಾಮೀಣ ಪ್ರದೇಶದಲ್ಲಿ 2,672 ಜನರಿಗೆ ಪಡಿತರ ಚೀಟಿ ನೀಡಲಾಗಿದೆ. ಉಳಿದವರಿಗೆ ಪಡಿತರ ಚೀಟಿಯನ್ನು ಶೀಘ್ರದಲ್ಲಿಯೇ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಅರ್ಹರಿಗೆ ಪಡಿತರ ಚೀಟಿ ವಿತರಣೆ ಯಲ್ಲಿ ಅನಗತ್ಯವಾಗಿ ವಿಳಂಬವಾಗು ವುದು ಸರಿಯಲ್ಲ. ಈ ಪ್ರಕ್ರಿಯೆ ಒಂದು ವಾರದಲ್ಲಿ ಪೂರ್ಣಗೊಳ್ಳಬೇಕು. ಇಲ್ಲದಿ ದ್ದರೆ ಸಂಬಂಧಿಸಿದ ಅಧಿಕಾರಿ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಬೇಕಾಗು ತ್ತದೆ ಎಂದು ಶಾಸಕ ಆಘಾ ಅವರು ಎಚ್ಚರಿಸಿದರು.ಸಮನ್ವಯದ ಕೊರತೆ: ನಗರದಲ್ಲಿ ರೈಲ್ವೆ ಕೆಳ ಸೇತುವೆ ಮೂಲಕ ಹುಣಸನಹಳ್ಳಿ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಸರಿಯಾಗಿ ಆಗಿಲ್ಲ. ಪಿಡಬ್ಲ್ಯುಡಿ, ಬೆಸ್ಕಾಂ ಮತ್ತು ಕಂದಾಯ ಇಲಾಖೆಯ ಸಮನ್ವಯದ ಕೊರತೆ ಯಿಂದ ಈ ದುಸ್ಥಿತಿ ಬಂದಿದೆ.ಈ ಬಗ್ಗೆ ತುರ್ತಾಗಿ ಪರಿಶೀಲಿಸಿ, ವಿವಿಧ ಇಲಾ ಖೆಗಳ ನಡುವೆ ಸಮನ್ವಯ ಸಾಧಿಸಿ ಕ್ರಮ ಕೈಗೊಳ್ಳುವಂತೆ ಅವರು ಜಿಲ್ಲಾದಿಕಾರಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಡಾ.ಡಿ.ಎಸ್‌.ವಿಶ್ವನಾಥ್‌ ಅವರು, ಈ ಕುರಿತು ಶೀಘ್ರದ ಲ್ಲಿಯೇ ಸಭೆ ಕರೆದು ಪರಿಶೀಲಿಸು ವುದಾಗಿ ಭರವಸೆ ನೀಡಿದರು. ನಗರಸಭೆ ಆಯುಕ್ತ ಜಿ.ಎ.ಯಶ ವಂತ್‌ ಕುಮಾರ್‌ ಸಭೆಯಲ್ಲಿ ಇದ್ದರು.

ಪ್ರತಿಕ್ರಿಯಿಸಿ (+)