ಮಾನ್ವಿ: ಪ್ರಸ್ತುತ ಸಂದರ್ಭದಲ್ಲಿ ಆಂಗ್ಲಭಾಷೆ ಜಾಗತಿಕ ಮಟ್ಟದಲ್ಲಿ ಪ್ರಾಮುಖ್ಯತೆ ಹೊಂದಿದ ಭಾಷೆಯಾಗಿದೆ. ಪ್ರೌಢಶಾಲಾ ಹಂತದಲ್ಲಿಯೇ ಆಂಗ್ಲ ಭಾಷಾ ಶಿಕ್ಷಕರು ಉತ್ತಮ ಪೂರ್ವ ಸಿದ್ಧತೆಯೊಂದಿಗೆ ಮಕ್ಕಳಿಗೆ ಆಂಗ್ಲ ಭಾಷಾ ವಿಷಯವನ್ನು ಪರಿಣಾಮಕಾರಿಯಾಗಿ ಬೋಧಿಸುವುದು ಅವಶ್ಯ ಇದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಾಂಜನೇಯ ಹೇಳಿದರು.

ಗುರುವಾರ ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ ಜಿಲ್ಲಾ ಮಟ್ಟದ ಪ್ರೌಢಶಾಲೆಗಳ ಆಂಗ್ಲ ಭಾಷಾ ಬೋಧಕರ ಎರಡು ದಿನಗಳ ಶೈಕ್ಷಣಿಕ ಸಮಾಲೋಚನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ ಆಂಗ್ಲ ಭಾಷೆಯ ವ್ಯಾಕರಣ, ಬರವಣಿಗೆ, ಸಂವಹನ ಹಾಗೂ ಭಾಷೆಯ ಉಚ್ಛಾರಣೆ ಕುರಿತು ಕಲಿಸಲು ಶಿಕ್ಷಕರು ಹೆಚ್ಚು ಮಹತ್ವ ನೀಡಬೇಕು. ಗ್ರಾಮೀಣ ಪ್ರದೇಶಗಳ ಮಕ್ಕಳಿಗೆ ಆಂಗ್ಲ ಭಾಷೆ ಕಲಿಯುವುದು ಕಠಿಣ ಎನ್ನುವ ಮನೋಭಾವ ಬದಲಾಯಿಸಲು ಶಿಕ್ಷಕರು ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ದೊಡ್ಡಮನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಬೆಂಗಳೂರಿನ ಆಂಗ್ಲಭಾಷಾ ತಜ್ಞ ಪ್ರೊ.ಡಿ.ಆರ್.ಶಶಿಧರ, ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಹಾದೇವಪ್ಪ ಮಾನ್ವಿ, ಆಂಗ್ಲ ಭಾಷಾ ಬೋಧಕರ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಮಾರ್ಟಿನ್ ಅಮಲರಾಜ್, ತಾಲ್ಲೂಕು ಘಟಕ ಅಧ್ಯಕ್ಷ ಪ್ರಭುಲಿಂಗ ಹಿಡಕಲ್, ಗೌರವಾಧ್ಯಕ್ಷ ಹನುಮಂತರಾವ್ ಕುಲಕರ್ಣಿ, ಉಪಾಧ್ಯಕ್ಷ ಲಿಂಗರಾಜ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.