ಮಂಗಳವಾರ, ಮಾರ್ಚ್ 2, 2021
31 °C
ಜೆಡಿಎಸ್‌ ಕಾರ್ಯಕರ್ತರು ಕಾಂಗ್ರೆಸ್‌ಗೆ ಸೇರ್ಪಡೆ

‘ಪ್ರಾದೇಶಿಕ ಪಕ್ಷಗಳಿಗೆ ರಾಜ್ಯದಲ್ಲಿ ನೆಲೆ ಇಲ್ಲ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ಪ್ರಾದೇಶಿಕ ಪಕ್ಷಗಳಿಗೆ ರಾಜ್ಯದಲ್ಲಿ ನೆಲೆ ಇಲ್ಲ’

ದೇವನಹಳ್ಳಿ: ಪಕ್ಷದ ಸಿದ್ಧಾಂತ ಮೆಚ್ಚಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳುವ ಯಾವುದೇ ಇತರೆ ಪಕ್ಷದ ಯುವಕರು ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಮುಂದಾದರೆ ಪಕ್ಷದಲ್ಲಿ ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಸಲಹೆ ನೀಡಿದರು.

ಸಚಿವರ ನಿವಾಸದಲ್ಲಿ ನಡೆದ ಜೆಡಿಎಸ್‌ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ, ಪಕ್ಷಕ್ಕೆ ಬರ ಮಾಡಿಕೊಂಡು ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಾದೇಶಿಕ ಪಕ್ಷಗಳಿಗೆ ನೆಲೆ ಇಲ್ಲ ಎಂಬುದನ್ನು ಈ ಹಿಂದಿನ ಅನೇಕ ರಾಜಕೀಯ ಪಕ್ಷದ ಮುಖಂಡರು ಪ್ರತ್ಯೇಕ ಪಕ್ಷ ಸ್ಥಾಪಿಸಿ ಅದರ ಸಾಧಕ ಭಾದಕ ಕಂಡಿರುವುದೇ ಸಾಕ್ಷಿ ಎಂದರು.ರಾಜ್ಯದ ಮತದಾರರು ಪ್ರಾದೇಶಿಕ ಪಕ್ಷಗಳನ್ನು ತಿರಸ್ಕರಿಸಿದ್ದಾರೆ. ಗಟ್ಟಿ ನೆಲೆ ಇರುವುದು ರಾಷ್ಟ್ರೀಯ ಪಕ್ಷಗಳಿಗೆ ಮಾತ್ರ. ರಾಜ್ಯ ಸರ್ಕಾರದ ಆಡಳಿತದಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶವಿಲ್ಲ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ.

ಆದರೆ ಪಕ್ಷದ ಕಾರ್ಯಕರ್ತರು ಯೋಜನೆಗಳ ಬಗ್ಗೆ ಜನ ಸಾಮಾನ್ಯರಿಗೆ ತಿಳಿಸಬೇಕು. ಮುಖ್ಯಮಂತ್ರಿ ನೇತೃತ್ವದಲ್ಲೆ ಮುಂದಿನ ಚುನಾವಣೆಗೆ ಸಜ್ಜಾಗಬೇಕಿರುವುದರಿಂದ ಪಕ್ಷದ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಯಾವಾಗಲೂ ಹೆಚ್ಚು ಸಕ್ರಿಯರಾಗಬೇಕು ಎಂದು ಸಲಹೆ ನೀಡಿದರು.ತಾಲ್ಲೂಕಿನ ಚಿಕ್ಕಸಣ್ಣೆ ಗ್ರಾಮದ ಜೆಡಿಸ್ ಮುಖಂಡ ನಂದಕುಮಾರ್, ರಾಮಾಂಜಿನಪ್ಪ, ರಘು, ವೆಂಕಟಸ್ವಾಮಿ, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಗ್ರಾ.ಪಂ ಸದಸ್ಯೆ ಪ್ರೇಮಾ ಮುನಿಯಪ್ಪ, ಮಾಜಿ ಸದಸ್ಯ ಮುನಿಕೃಷ್ಣಪ್ಪ,ಚಂದ್ರಶೇಖರ್, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಜಗನ್ನಾಥ್, ಜಿ.ಪಂ ಸದಸ್ಯ ಕೆ.ಸಿ. ಮಂಜುನಾಥ್, ತಾ.ಪಂ ಮಾಜಿ ಸದಸ್ಯೆ ಉಷಾರಾಣಿ, ಗೋಪಾಲ್, ಮುಖಂಡ ಶ್ರೀನಾಥ್, ಮುನಿಆಂಜಿನಪ್ಪ, ರಾಮಾಂಜಿನಪ್ಪ, ಬ್ಲಾಕ್ ಕಾಂಗ್ರೆಸ್ ಟೌನ್ ಅಧ್ಯಕ್ಷ ನಂದಕುಮಾರ್ ಉಪಸ್ಥಿತರಿದ್ದರು.

*

ಕೃಷಿ ಇಲಾಖೆ ಸೇರಿದಂತೆ ಪ್ರತಿಯೊಂದು ಇಲಾಖೆಯ ಅನುದಾನ ಮತ್ತು ಪ್ರಗತಿಪರ ಯೋಜನೆಗಳು ಉತ್ತಮ ರೀತಿಯಲ್ಲಿವೆ. ಇವು ರೈತರಿಗೆ ಮನೆ ಬಾಗಿಲಲ್ಲಿ ಸಿಗುತ್ತಿವೆ

-ಕೃಷ್ಣ ಭೈರೇಗೌಡ

ಜಿಲ್ಲಾ ಉಸ್ತುವಾರಿ ಸಚಿವ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.