ಭಾನುವಾರ, ಜೂನ್ 13, 2021
21 °C

‘ಪ್ರಾದೇಶಿಕ ಸಮಸ್ಯೆಗೆ ಜೆಡಿಎಸ್‌ ಸ್ಪಂದನೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೃಷ್ಣರಾಜಪೇಟೆ: ರಾಜ್ಯದ ಹಿತವನ್ನು ಕಾಯುವ, ಪ್ರಾದೇಶಿಕ ಸಮಸ್ಯೆಗಳನ್ನು ಬಗೆಹರಿಸುವ ಸಾಮರ್ಥ್ಯ ಮತ್ತು ಬದ್ಧತೆ ಇರುವ ಪಕ್ಷ ಜೆಡಿಎಸ್‌ ಮಾತ್ರ ಎಂದು ಮಂಡ್ಯ ಲೋಕಸಭಾ ಚುನಾವಣೆಯ ನಿಯೋಜಿತ ಜೆಡಿಎಸ್ ಅಭ್ಯರ್ಥಿ ಸಿ.ಎಸ್‌.ಪುಟ್ಟರಾಜು ತಿಳಿಸಿದರು.ತಾಲ್ಲೂಕಿನ ಗವಿರಂಗನಾಥಸ್ವಾಮಿ ದೇವಾಲಯದ ಬಳಿ ಶುಕ್ರವಾರ ಏರ್ಪಡಿಸಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜೆಡಿಎಸ್‌ ಪಕ್ಷದಲ್ಲಿ ಕಾರ್ಯಕರ್ತರೇ ಆಸ್ತಿಯಾಗಿದ್ದಾರೆ. ಕಾರ್ಯಕರ್ತರ ಪರಿಶ್ರಮದಿಂದ ಮುಖಂಡರು ರೂಪುಗೊಳ್ಳುತ್ತಿದ್ದು, ಪಕ್ಷ ಅಧಿಕಾರಕ್ಕೆ ಬರಲು ಬೇರುಮಟ್ಟದ ಸಂಘಟನೆಯೇ ಕಾರಣ. ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ, ಎಲ್ಲ ಮುಖಂಡರೂ ಒಂದಾಗಿ ಪಕ್ಷ ಸಂಘಟನೆಗೆ ಶ್ರಮಿಸುತ್ತಿದ್ದಾರೆ. ಈ ಬಗ್ಗೆ ಯಾವುದೇ ಅಪಪ್ರಚಾರಗಳಿಗೆ ಕಾರ್ಯಕರ್ತರು ಕಿವಿಗೊಡಬಾರದು. ರಾಜ್ಯದ ಹಿತವನ್ನು ಕಾಯಲು ವಿಫಲವಾಗಿರುವ ಹಾಗೂ ಚುನಾವಣೆ ಸಂದರ್ಭದಲ್ಲಿ ಮತದಾರರನ್ನು ವಂಚಿಸಿ ಆಯ್ಕೆಯಾಗಲು ಹವಣಿಸುತ್ತಿರುವ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳನ್ನು ಅಧಿಕಾರದಿಂದ ದೂರವಿರಿಸಬೇಕು

ಕಳೆದ ಎರಡು ಚುನಾವಣೆಗಳಲ್ಲಿ ಸೋಲುಂಡಿರುವ ತಮ್ಮನ್ನು ಈ ಬಾರಿ ಜನರ ಸೇವೆ ಮಾಡುವ ಅವಕಾಶವನ್ನು ಕಲ್ಪಿಸಬೇಕು ಎಂದು ಅವರು ಮನವಿ ಮಾಡಿದರು.ಶಾಸಕ ಕೆ.ಸಿ.ನಾರಾಯಣಗೌಡ, ತಾಲ್ಲೂಕು ಜೆಡಿಎಸ್‌ ಅಧ್ಯಕ್ಷ ಬಿ.ಎಲ್‌.ದೇವರಾಜು ಸೇರಿದಂತೆ ವಿವಿಧ ಮುಖಂಡರು ಪಾಲ್ಗೊಂಡಿದ್ದರು.ರಿಪಬ್ಲಿಕನ್‌ ಪಕ್ಷಕ್ಕೆ ನೇಮಕ

ಮಳವಳ್ಳಿ:
ಭಾರತೀಯ ರಿಪಬ್ಲಿಕನ್‌ ಪಕ್ಷ (ಅ)ದ ತಾಲ್ಲೂಕು ಘಟಕದ ಅಧ್ಯಕ್ಷರನ್ನಾಗಿ ಪಟ್ಟಣದ ಕೀರ್ತಿನಗರದ ನಿವಾಸಿ ಡಾ.ಎಂ.ಆರ್‌. ಪ್ರಸಾದ್‌ ಅವರನ್ನು ನೇಮಕ ಮಾಡಲಾಗಿದೆ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಕೊಮ್ಮೇರಹಳ್ಳಿ ಕೃಷ್ಣಮೂರ್ತಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.