ಶನಿವಾರ, ಮೇ 8, 2021
24 °C

‘ಬಿಜೆಪಿಯಲ್ಲಿ ಸ್ವಾರ್ಥ ರಾಜಕಾರಣ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ‘ಬಿಜೆಪಿಯಲ್ಲಿ ಸ್ವಾರ್ಥ ರಾಜಕಾರಣ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿಗಳನ್ನು ಆ ಪಕ್ಷದ ಮುಖಂಡರೇ ಸೋಲಿಸಲು ತಂತ್ರ ಮಾಡಿದ್ದಾರೆ’ ಎಂದು ಉಡುಪಿ– ಚಿಕ್ಕಮಗಳೂರು ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಧನಂಜಯ್‌ ಕುಮಾರ್‌ ಹೇಳಿದರು.ಉಡುಪಿಯಲ್ಲಿ ಶುಕ್ರವಾರ ಪತ್ರಿಕಾ­ಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಅನಂತ್‌ ಕುಮಾರ್‌ ಅವರನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್‌.­ಯಡಿ­ಯೂರಪ್ಪ, ಯಡಿಯೂರಪ್ಪ ಅವರನ್ನು ಮಾಜಿ ಉಪ ಮುಖ್ಯಮಂತ್ರಿ ಈಶ್ವರಪ್ಪ ಮತ್ತು ಉಡುಪಿಯ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರನ್ನು ಕಾರ್ಕಳ ಶಾಸಕ ವಿ.ಸುನಿಲ್‌ ಕುಮಾರ್‌ ಸೋಲಿಸಲಿ­ದ್ದಾರೆ ಎಂದು ಹೇಳಿದರು.ಬಿಜೆಪಿಯ ಹಿರಿಯ ನಾಯಕ ಎಲ್‌.ಕೆ ಅಡ್ವಾಣಿ ಅವರು ಗುಜರಾತ್‌ನ ಗಾಂಧಿ­ನಗರ ಕ್ಷೇತ್ರದಲ್ಲಿ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರೆ. ಅಲ್ಲಿಂದ ಸ್ಪರ್ಧಿಸಿದರೆ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರೇ ತಮ್ಮನ್ನು ಸೋಲಿಸಬಹುದು ಎಂಬ ಭಯ ಇದಕ್ಕೆ ಕಾರಣ ಎಂದರು.

ಐದು ಬಾರಿ ಸಂಸದರಾಗಿರುವ ಅನಂತ್‌ ಕುಮಾರ್‌ ಅವರು ಮೋದಿ ಹೆಸರಿನಲ್ಲಿ ಮತ ಕೇಳುತ್ತಿದ್ದಾರೆ. ಅವರು ಏನು ಕೆಲಸ ಮಾಡಿದ್ದಾರೆ ಎಂದು ಪ್ರಶ್ನಿಸಿದರು.ಶಾಸಕರಾದ ಮಧು ಬಂಗಾರಪ್ಪ, ಬಿ.ಬಿ.ನಿಂಗಯ್ಯ ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.