ಬೆಂಗಳೂರು: ‘ಬಿಬಿಎಂಪಿ ವಿಭಜನೆ ಚಿಂತನೆ ಕೈಬಿಟ್ಟು ಅಧಿಕಾರ ವಿಕೇಂದ್ರೀಕರಣ ಮಾಡುವ ಮೂಲಕ ನಗರದ ಅಭಿವೃದ್ಧಿಗೆ ಸರ್ಕಾರ ಮುಂದಾಗಬೇಕು’ ಎಂದು ಬಿಬಿಎಂಪಿಯ ಜೆಡಿಎಸ್ ಪಕ್ಷದ ನಾಯಕ ಆರ್.ಪ್ರಕಾಶ್ ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಭಜನೆ ಮಾಡುವುದರಿಂದ ಪಾಲಿಕೆಯ ಅಭಿವೃದ್ಧಿ ಸಾಧ್ಯ
ವಿಲ್ಲ. ಬದಲಿಗೆ ಆರ್ಥಿಕ, ಭೌಗೋಳಿಕ ಸಮಸ್ಯೆಗಳು ಹೆಚ್ಚಾಗುತ್ತವೆ. ವಲಯ ಮಟ್ಟದಲ್ಲಿ ಕೆಎಎಸ್ ಅಧಿಕಾರಿಗಳ ಬದಲಿಗೆ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವ ಮೂಲಕ ಅಧಿಕಾರ ವಿಕೇಂದ್ರೀಕರಣಗೊಳಿಸಬೇಕು’ ಎಂದರು.

‘ಪಾಲಿಕೆಯ ವೈದ್ಯಕೀಯ ಪರಿಹಾರ ನಿಧಿಗೆ ಬಂದಿರುವ 4 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ಶೀಘ್ರವೇ ವಿಲೇವಾರಿ ಮಾಡುವುದಾಗಿ ಕಳೆದ ಬಾರಿ ಪಾಲಿಕೆಯ ಕೌನ್ಸಿಲ್ ಸಭೆಯಲ್ಲಿ ಮೇಯರ್ ಭರವಸೆ ನೀಡಿದ್ದರು. ಆದರೆ, ಈವರೆಗೂ ಅರ್ಜಿಗಳ ವಿಲೇವಾರಿಗೆ ಕ್ರಮ ಕೈಗೊಂಡಿಲ್ಲ’ ಎಂದು ಆರೋಪಿಸಿದರು.

‘ಈಗ ಹಳೆಯ ಅರ್ಜಿಗಳ ಜತೆಗೆ ಒಂದು ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಆದ್ದರಿಂದ ತ್ವರಿತವಾಗಿ ಅರ್ಜಿಗಳ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು’ ಎಂದರು.

ನಗರದ ಅಭಿವೃದ್ಧಿಗಾಗಿ ಮತ್ತು ಪಾಲಿಕೆಯಿಂದ ಗುತ್ತಿಗೆದಾರರಿಗೆ ಬಾಕಿ ಇರುವ ಹಣವನ್ನು ಪಾವತಿಸಲು ₨ 1,600 ಕೋಟಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಇದು ಪಾಲಿಕೆ ಆರ್ಥಿಕವಾಗಿ ದುರ್ಬಲವಾಗಿರುವುದಕ್ಕೆ ಸಾಕ್ಷಿ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.