ಸೋಮವಾರ, ಜೂನ್ 21, 2021
28 °C

‘ಬೀದರ್‌ ಟಿಕೆಟ್‌ ನೀಡಿಕೆಯಲ್ಲಿ ಪಾತ್ರವಿಲ್ಲ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ‘ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಸೂರ್ಯಕಾಂತ ನಾಗಮಾರಪಲ್ಲಿ ಬಿಟ್ಟು ಬೇರೆಯವರಿಗೆ ಟಿಕೆಟ್‌ ನೀಡಿರುವುದು ಪಕ್ಷದ ರಾಷ್ಟ್ರೀಯ ಚುನಾವಣಾ ಸಮಿತಿಯ ತೀರ್ಮಾನ. ಅದರಲ್ಲಿ ನಮ್ಮ ಪಾತ್ರವಿಲ್ಲ’ ಎಂದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ’ ಸ್ಪಷ್ಟಪಡಿಸಿದರು.ನಗರದಲ್ಲಿ ಭಾನುವಾರ ಸುದ್ದಿಗಾರ­ರೊಂದಿಗೆ ಮಾತನಾಡಿದ ಅವರು, ‘ಗುರು­ಪಾದಪ್ಪ ನಾಗಮಾರ­ಪಲ್ಲಿ ಆರೋಪಿಸುವಂತೆ ಸೂರ್ಯಕಾಂತ ಅವರಿಗೆ ಟಿಕೆಟ್‌ ಕೊಡಿಸುವುದಾಗಿ ತಾವಾಗಲಿ ಅಥವಾ ಜಗದೀಶ ಶೆಟ್ಟರ್ ಆಗಲಿ ಭರವಸೆ ನೀಡಿರ­ಲಿಲ್ಲ. ಪಕ್ಷದ ರಾಷ್ಟ್ರೀಯ ಘಟಕದ ತೀರ್ಮಾನವನ್ನು ಎಲ್ಲರೂ ಗೌರವಿಸಬೇಕಾಗಿದೆ’ ಎಂದು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.