‘ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ’

7

‘ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ’

Published:
Updated:

ಬೆಳಗಾವಿ: ‘ಇಲ್ಲಿಯ ಸುವರ್ಣ ವಿಧಾನಸೌಧದಲ್ಲಿ ನವೆಂಬರ್‌ ತಿಂಗಳಿನಲ್ಲಿ 10 ದಿನಗಳ ಅವಧಿಯ ಚಳಿಗಾಲದ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ’ ಎಂದು ವಿಧಾನ ಪರಿಷತ್‌ ಸಭಾಪತಿ ಡಿ.ಎಚ್‌. ಶಂಕರಮೂರ್ತಿ ಹೇಳಿದರು.‘ನವೆಂಬರ್‌ 11ರಿಂದ ಅಧಿವೇಶನ ನಡೆಸುವ ಕುರಿತು ಸಲಹೆ ನೀಡಿದ್ದು, ಈ ಕುರಿತು ಸರ್ಕಾರ ತೀರ್ಮಾನ ಕೈಗೊಳ್ಳಲಿದೆ’ ಎಂದು  ಶಂಕರಮೂರ್ತಿ ಬುಧವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.‘ಅಧಿವೇಶನ ಕುರಿತು ಈಗಾಗಲೇ ಸದನ ಕಲಾಪಗಳ ಸಮಿತಿಯು ಮುಖ್ಯಮಂತ್ರಿಗಳೊಂದಿಗೆ ಸಭೆಯನ್ನು ನಡೆಸಿದೆ. ಈ ಕುರಿತು ಅಂತಿಮವಾಗಿ ನಿರ್ಣಯ ಕೈಗೊಂಡು, ವಿಧಾನಸಭಾಧ್ಯಕ್ಷರು, ಸಭಾಪತಿ ಜತೆ  ಚರ್ಚಿಸಿ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಿದೆ’ ಎಂದರು.ಪ್ರಸಕ್ತ ವರ್ಷ ಈವರೆಗೆ 32 ದಿನಗಳ ಕಾಲ ಅಧಿವೇಶನ ನಡೆಸಲಾಗಿದೆ ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry