‘ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಪಾರ ಉದ್ಯೋಗಾವಕಾಶ’

7

‘ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಪಾರ ಉದ್ಯೋಗಾವಕಾಶ’

Published:
Updated:

ಮಡಿಕೇರಿ: ಬ್ಯಾಂಕಿಂಗ್ ಸೇವೆಗಳಲ್ಲಿ 6 ರಿಂದ 8 ಲಕ್ಷ ಹುದ್ದೆಗಳು ಸೃಷ್ಟಿಯಾಗಲಿದ್ದು, ವಿದ್ಯಾರ್ಥಿಗಳು ಕಠಿಣ ಪರಿಶ್ರಮ ವಹಿಸಬೇಕು ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಅರುಣಾಚಲ ಶರ್ಮಾ  ಸಲಹೆ ಮಾಡಿದರು.ಐಬಿಪಿಎಸ್ ಸಂಸ್ಥೆಯವರು ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಖಾಲಿಯಿರುವ ಪ್ರೋಬೆಷನರಿ ಹುದ್ದೆಗಳ ನೇಮಕಾತಿಗಾಗಿ ಅಕ್ಟೋಬರ್‌ನಲ್ಲಿ ನಡೆಸುವ ಬ್ಯಾಂಕಿಂಗ್ ಪರೀಕ್ಷಾ ಪೂರ್ವ ತರಬೇತಿಗೆ ನಗರದ ಜಿಲ್ಲಾ ಕೈಗಾರಿಕಾ ತರಬೇತಿ ಕಾಲೇಜಿನಲ್ಲಿ ಸೋಮವಾರ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸಾಮಾನ್ಯ ಲಿಖಿತ ಪರೀಕ್ಷೆಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಸಿ.ಜಗನ್ನಾಥ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕಚೇರಿ ವತಿಯಿಂದ ಬ್ಯಾಂಕಿಂಗ್ ಮತ್ತಿತರ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಇದರ ಸದುಪಯೋಗ ಪಡೆಯುವಂತೆ ಅವರು ಸಲಹೆ ಮಾಡಿದರು. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ನಾಗರಾಜು ಮಾತನಾಡಿದರು. ಜಿಲ್ಲಾ ವಿಮಾ ನಿವೃತ್ತ ಅಧಿಕಾರಿ ರಮೇಶ್ ಮತ್ತಿತರರು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry