ಇಸ್ಲಾಮಾಬಾದ್ (ಪಿಟಿಐ): ‘ಭಯೋತ್ಪಾದನೆಯ ವೈಭವೀಕರಣ ಹಾಗೂ ಭಯೋತ್ಪಾದಕ ಸಂಘಟನೆಗಳಿಗೆ ಉತ್ತೇಜನ ನೀಡುವುದನ್ನು ನಿಲ್ಲಿಸಿ’ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಪಾಕಿಸ್ತಾನಕ್ಕೆ ತಾಕೀತು ಮಾಡಿದ್ದಾರೆ.

ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ಶುಕ್ರವಾರ ನಡೆದ ಸಾರ್ಕ್ ರಾಷ್ಟ್ರಗಳ ಗೃಹ ಸಚಿವರ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಿಂಗ್, ‘ಪಾಕಿಸ್ತಾನ ಭಯೋತ್ಪಾದನೆಗೆ ಉತ್ತೇಜನ ನೀಡುವುದನ್ನು ನಿಲ್ಲಿಸಿ, ಅದರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಬೇಕು’ ಎಂದು ಹೇಳಿದ್ದಾರೆ.

‘ಭಯೋತ್ಪಾದನೆಯಲ್ಲಿ ಒಳ್ಳೆಯದು, ಕೆಟ್ಟದು ಎಂಬ ವರ್ಗೀಕರಣವಿಲ್ಲ. ಭಯೋತ್ಪಾದನೆ ಯಾವಾಗಲೂ ಕೆಟ್ಟದ್ದೇ. ಭಯೋತ್ಪಾದಕ ಅಥವಾ ಭಯೋತ್ಪಾದಕ ಸಂಘಟನೆಗಳ ವಿರುದ್ಧ ಹೋರಾಡುವುದು ಮಾತ್ರವಲ್ಲ, ಭಯೋತ್ಪಾದಕರಿಗೆ ಬೆಂಬಲ ನೀಡುವ ಹಾಗೂ ಭಯೋತ್ಪಾದಕ ಸಂಘಟನೆಗಳಿಗೆ ನೆರವು ನೀಡುವ ಯಾವುದೇ ವ್ಯಕ್ತಿ, ಸಂಘಟನೆ ಇಲ್ಲವೇ ರಾಷ್ಟ್ರದ ವಿರುದ್ಧ ಕಠಿಣ ಕ್ರಮ ಅಗತ್ಯ’ ಎಂದು ಸಿಂಗ್ ತಿಳಿಸಿದ್ದಾರೆ.

ಸಮಾವೇಶದಲ್ಲಿ ಹಿಂದಿಯಲ್ಲಿ ಮಾತನಾಡಿದ ಸಿಂಗ್, ‘ಯಾವುದೇ ರಾಷ್ಟ್ರ ಭಯೋತ್ಪಾದನೆಯನ್ನು ವೈಭವೀಕರಿಸಬಾರದು ಹಾಗೂ ಅದಕ್ಕೆ ಬೆಂಬಲ ಘೋಷಿಸಬಾರದು’ ಎಂದು ಪಾಕಿಸ್ತಾನದ ಪ್ರಧಾನಮಂತ್ರಿ ನವಾಜ್ ಷರೀಫ್ ಅವರಿಗೆ ಪರೋಕ್ಷವಾಗಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.