ಉಡುಪಿ: ‘ಉಡುಪಿ– ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಕ್ಷದ ವತಿಯಿಂದ ಪ್ರಚಾರ ಕಾರ್ಯ ಕೈಗೊಳ್ಳಲಾಗಿದ್ದು ಜನರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಯುವಕರು, ಮಹಿಳೆಯರು ಸೇರಿದಂತೆ ಎಲ್ಲ ವರ್ಗದ ಜನರು ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ’ ಎಂದು ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಎಸ್.ಎಚ್. ಗುರುದೇವ್ ಹೇಳಿದರು.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕೊಪ್ಪ, ತರೀಕೆರೆ, ಚಿಕ್ಕಮಗಳೂರು ನಗರ, ಉಡುಪಿಯ ಪಡುಬಿದ್ರಿ, ಕುಂದಾಪುರ, ಮಲ್ಪೆ, ಕಾರ್ಕಳ, ಬೆಳ್ಮಣ್, ಹೆಬ್ರಿ ಎಲ್ಲೆಡೆ ಪ್ರಚಾರ ಮಾಡಲಾಗಿದೆ. ಉಡುಪಿ ನಗರ ಮತ್ತು ಮಣಿಪಾಲ ಭಾಗದಲ್ಲಿಯೂ ಪ್ರಚಾರ ನಡೆಸಿ ಮತ ಯಾಚಿಸಲಾಗುತ್ತದೆ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಭ್ರಷ್ಟಾಚಾರ ನಿರ್ಮೂಲನೆ ನಮ್ಮ ಪಕ್ಷದ ಮೂಲ ಉದ್ದೇಶವಾಗಿದೆ. ಇದಲ್ಲದೆ ಸ್ಥಳೀಯ ಸಮಸ್ಯೆಗಳ ನಿವಾರಣೆಗೆ ಮತ್ತು ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತದೆ. ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಾಕಷ್ಟು ಅವಕಾಶ ಇದೆ. ವಿಶ್ವ ದರ್ಜೆಯ ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿ ಮಾಡಿದರೆ ಇಲ್ಲಿ ಎಲ್ಲ ಬಗೆಯ ಆರ್ಥಿಕ ಚಟುವಟಿಕೆಗಳಿಗೂ ಪ್ರೋತ್ಸಾಹ ಸಿಗಲಿದೆ. ಆಟೊ– ಟ್ಯಾಕ್ಸಿ ಚಾಲಕರು, ಸ್ಥಳೀಯ ವ್ಯಾಪಾರಿಗಳು ಎಲ್ಲರಿಗೂ ಅನುಕೂಲವಾಗಲಿದೆ ಎಂದರು.

ವಿದ್ಯಾವಂತ ಯುವಕರಿಗೆ ಉದ್ಯೋಗ ಅವಕಾಶ ಕಲ್ಪಿಸಲಾಗುತ್ತದೆ ಮತ್ತು ಕೌಶಲ್ಯ ಅಭಿವೃದ್ಧಿಗೆ ಬೇಕಾದ ಮೂಲಸೌಕರ್ಯ ನೀಡಲಾಗುತ್ತದೆ. ಸಮಾಜದಲ್ಲಿ ಎಲ್ಲ ವರ್ಗದವರೂ ಸಾಮರಸ್ಯದಿಂದ ಬಾಳುವ ವಾತಾವರಣ ನಿರ್ಮಾಣ ನಮ್ಮ ಧ್ಯೇಯವಾಗಿದೆ. ಉಡುಪಿಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಇಲ್ಲ. ಕಾಲೇಜು ಆರಂಭಿಸುವ ಮೂಲಕ ಈ ಭಾಗದ ಯುವಕರಿಗೆ ಅನುಕೂಲ ಮಾಡಿಕೊಡಲಾಗುತ್ತದೆ. ಸಮರ್ಪಕ ಕುಡಿಯುವ ನೀರಿನ ಪೂರೈಕೆ ಮತ್ತು ಕಸ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ.

ರೈತರು ಎದುರಿಸುತ್ತಿರುವ ಎಲ್ಲ ರೀತಿಯ ಸಮಸ್ಯೆಗಳಿಗೆ ರಚನಾತ್ಮಕವಾಗಿ ಸ್ಪಂದಿಸಲಾಗುತ್ತದೆ. ಅಲ್ಲದೆ ಮೀನುಗಾರರಿಗೆ ಸಾಲ ಸೌಲಭ್ಯಗಳ ಸಹಿತ ಎಲ್ಲ ರೀತಿಯ ಅನುಕೂಲ ಕಲ್ಪಿಸಿಕೊಡಲಾಗುತ್ತದೆ ಎಂದು ಗುರುದೇವ್ ಭರವಸೆ ನೀಡಿದರು.

ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಂದ ಜನರಿಗೆ ನಿರಾಸೆ ಆಗಿದೆ. ಈ ಎರಡೂ ಪಕ್ಷಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಈ ಪಕ್ಷಗಳಿಂದ ಬೇಸತ್ತಿರುವ ಜನರು ಬದಲಾವಣೆಯ ನಿರೀಕ್ಷೆಯಲ್ಲಿದ್ದಾರೆ. ಚಿಕ್ಕಮಗಳೂರಿನ ಕೊಪ್ಪದವನಾದ ನಾನು ಎಂಜಿನಿಯರ್ಮುಗಿಸಿ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಉದ್ಯೋಗ ಮಾಡುತ್ತಿದ್ದೇನೆ. ಭ್ರಷ್ಟ ವ್ಯವಸ್ಥೆಯ ವಿರುದ್ಧ ಹೋರಾಟ ಮಾಡಬೇಕು. ಸಮಾಜದಲ್ಲಿ ಬದಲಾವಣೆ ತರಬೇಕು ಎಂಬ ಉದ್ದೇಶದಿಂದ ರಾಜಕೀಯಕ್ಕೆ ಬಂದಿದ್ದೇನೆ. ಜನರು ಬೆಂಬಲ ನೀಡಬೇಕು ಎಂದು ಅವರು ಮನವಿ ಮಾಡಿದರು. ‘ಆಪ್’ ಕಾರ್ಯಕರ್ತರಾದ ಹರ್ಷ ಹಳೆಕೋಟೆ, ಕಾರ್ತಿಕ್ ಬಾಲಾ, ವಿಜಯ್ ಕುಮಾರ್ ಕಾಪು, ಮಹಮ್ಮದ್ ಸಿರಾಜ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.