‘ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ’

7

‘ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ’

Published:
Updated:

ದೊಡ್ಡಬಳ್ಳಾಪುರ: ನೇರ ನಗದು ವರ್ಗಾವಣೆ ಯೋಜನೆ ಸೇರಿದಂತೆ ಸರ್ಕಾರದ ಹಲವಾರು ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವ ದಿಸೆಯಲ್ಲಿ ಪ್ರತಿಯೊಬ್ಬರೂ ಬ್ಯಾಂಕ್ ಖಾತೆಗಳನ್ನು ಹೊಂದುವುದು  ಅಗತ್ಯ. ಈ ದಿಸೆಯಲ್ಲಿ ಆರ್ಥಿಕ ಸೇರ್ಪಡೆ ಕಾರ್ಯಕ್ರಮದಡಿ ಬ್ಯಾಂಕ್‌ಗಳು ಗ್ರಾಮೀಣ ಪ್ರದೇಶದಲ್ಲಿ ಮನೆ ಬಾಗಿಲಿಗೇ ಬ್ಯಾಂಕಿಂಗ್ ಸೇವೆ ನೀಡುವಲ್ಲಿ ಸಕ್ರಿಯ ವಾಗಿವೆ ಎಂದು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ವ್ಯವಸ್ಥಾಪಕ ನಿರ್ದೇ ಶಕ ಮಲೈ ಮುಖರ್ಜಿ ಹೇಳಿದರು.ತಾಲ್ಲೂಕಿನ ಲಿಂಗನಹಳ್ಳಿ ಗ್ರಾಮದಲ್ಲಿ ನಡೆದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಆರ್ಥಿಕ ಸೇರ್ಪಡೆ ಹಾಗೂ ಗ್ರಾಮದ ದತ್ತು ಸ್ವೀಕಾರ ಸಮಾ ರಂಭದಲ್ಲಿ ಭಾಗವಹಿಸಿ ಅವರು ಮಾತ ನಾಡಿದರು.ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದಾಗಿದೆ. ದೇಶದಲ್ಲಿ ೪,೩೦೦ಕ್ಕೂ ಹೆಚ್ಚು ಶಾಖೆಗಳನ್ನು ಹೊಂದಿದೆ. ಆರ್ಥಿಕ ಸೇರ್ಪಡೆ ಕಾರ್ಯಕ್ರಮದಡಿ ಗ್ರಾಮೀಣ ಪ್ರದೇಶದ ಜನರಿಗೆ ಬ್ಯಾಂಕಿಂಗ್ ಸೇವೆ ನೀಡಲು ಬ್ಯಾಂಕ್ ಕಟಬದ್ಧವಾಗಿದೆ. ಇದರೊಂದಿಗೆ ಗ್ರಾಮವನ್ನು ದತ್ತು ತೆಗೆದುಕೊಳ್ಳುವ ಮೂಲಕ ಆರ್ಥಿಕ ಬೆಳವಣಿಗೆಗೆ ಪೂರಕವಾದ ಕಾರ್ಯ ಕ್ರಮ ರೂಪಿಸಲಾಗುವುದು. ಬ್ಯಾಂಕಿಂಗ್ ವ್ಯವಸ್ಥೆಗೆ ಅಧಿಕಾರಿಗಳನ್ನು ನೇಮಿ ಸಲಾಗಿದ್ದು, ಗ್ರಾಮಸ್ಥರ ಸಹಕಾರ ಅಗತ್ಯ ಎಂದ ಅವರು ಲಿಂಗನಹಳ್ಳಿ ಸರ್ಕಾರಿ ಶಾಲೆಗೆ ನೀರು ಶುದ್ಧೀಕರಣ ಯಂತ್ರದ ವ್ಯವಸ್ಥೆ ಮಾಡಿಕೊಡುವುದಾಗಿ ಭರವಸೆ ನೀಡಿದರು.ಗ್ರಾಮದ ಮುಖಂಡ ಹಾಗೂ ತಾಲ್ಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಿ. ಲಕ್ಷ್ಮೀಪತಿ ಮಾತನಾಡಿ, ಇಂದು ಪ್ರತಿ ಹಂತದಲ್ಲಿಯೂ ಬ್ಯಾಂಕ್‌ ಗಳ ಅಗತ್ಯ ಜನಸಾಮಾನ್ಯರಿಗೆ ಇದೆ. ಈ ನಿಟ್ಟಿನಲ್ಲಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಕಾರ್ಯಕ್ರಮಗಳು ಜನರ ಹಿತಕ್ಕೆ ಪೂರಕವಾಗಿವೆ ಎಂದರು.ಕಾರ್ಯಕ್ರಮದಲ್ಲಿ ಸ್ಥಳದಲ್ಲಿಯೇ ಬ್ಯಾಂಕಿಂಗ್ ಸೇವೆ ಒದಗಿಸುವ ಕುರಿತು ಹಾಗೂ ಆರ್ಥಿಕವಾಗಿ ದುರ್ಬಲರಾಗಿ ರುವವರಿಗೆ ಕೇಂದ್ರ ಸರ್ಕಾರದ ಎನ್.ಪಿ.ಎಸ್. ಸ್ವಾವಲಂಬನ್ ಯೋಜನೆ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು.ಬ್ಯಾಂಕ್‌ನ ವಿವಿಧ ಸಾಲ ಸೌಲಭ್ಯದ ಫಲಾನುಭವಿಗಳಿಗೆ ಹಾಗೂ ಸ್ತ್ರೀ ಶಕ್ತಿ ಸಂಘಗಳಿಗೆ ಮಂಜೂರಾತಿಯ ಚೆಕ್‌ ಗಳನ್ನು ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಕ್ಷೇತ್ರ ಮಹಾ ಪ್ರಬಂಧಕ ಬಾಲಕೃಷ್ಣನ್, ಕ್ಷೇತ್ರೀಯ ಮಹಾಪ್ರಬಂಧಕ ಸತ್ಯ ನಾರಾಯಣ್, ಪ್ರಾದೇಶಿಕ ವ್ಯವಸ್ಥಾಪಕ ಶಿವಕುಮಾರ್, ಶ್ರೀನಿವಾಸ ರೆಡ್ಡಿ, ಉಪ ಪ್ರಾದೇಶಿಕ ವ್ಯವಸ್ಥಾಪಕ ಬಾಲಕೃಷ್ಣ,  ರಾಜಘಟ್ಟ ಶಾಖೆಯ ವ್ಯವಸ್ಥಾಪಕ ಮಂಜು ಮತ್ತಿತರರು ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry