ಭಾನುವಾರ, ಮಾರ್ಚ್ 7, 2021
22 °C
ಉಪ್ಪಿನಂಗಡಿ: ಬಿಜೆಪಿ ವಿರುದ್ಧ ಐವನ್ ಡಿಸೋಜ ಗಂಭೀರ ಆರೋಪ

‘ಮಹಾದಾಯಿ ಹೋರಾಟದಲ್ಲೂ ರಾಜಕೀಯ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ಮಹಾದಾಯಿ ಹೋರಾಟದಲ್ಲೂ ರಾಜಕೀಯ’ಉಪ್ಪಿನಂಗಡಿ: ‘ಮುಂದಿನ ದಿನಗಳಲ್ಲಿ ನಡೆಯುವ ಗೋವಾ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಮಹಾ ದಾಯಿ ಹೋರಾಟದಲ್ಲಿಯೂ ರಾಜಕೀಯ ಮಾಡುತ್ತಿದೆ. ಒಂದು ಕಣ್ಣಿಗೆ ಸುಣ್ಣ ಇನ್ನೊಂದು ಕಣ್ಣಿಗೆ ಬೆಣ್ಣೆ ಎಂಬ ನಡೆ ಯನ್ನು ಅನುಸರಿಸುತ್ತಿದೆ’ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ ಗಂಭೀರ ಆರೋಪ ಮಾಡಿದರು.ಬುಧವಾರ ಉಪ್ಪಿನಂಗಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗೋವಾ, ಮಹಾರಾಷ್ಟ್ರದಲ್ಲಿ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದರೂ, ಮಹಾದಾಯಿ ಸಮಸ್ಯೆಯನ್ನು ಬಗೆಹರಿಸಲು ಬಿಜೆಪಿಗೆ ಸಾಧ್ಯವಾಗಿಲ್ಲ. ಒಂದೆಡೆ ಬಿಜೆಪಿಯ ರಾಜ್ಯ ನಾಯಕರು ಎತ್ತಿನಹೊಳೆ ಯೋಜನೆಯ ಶೀಘ್ರ ಅನು ಷ್ಠಾನಕ್ಕೆ ಒತ್ತಾಯಿಸುತ್ತಿದ್ದಾರೆ. ಇನ್ನೊಂ ದೆಡೆ ಇಲ್ಲಿನ ಸಂಸದರು ಎತ್ತಿನ ಹೊಳೆ ಯೋಜನೆ ವಿರೋಧಿಸಿ ಜಾಥಾ ನಡೆಸು ತ್ತಾರೆ. ಇವೆಲ್ಲ ಬಿಜೆಪಿಯ ರಾಜಕೀಯ ನಾಟಕ’ ಎಂದು ಅವರು ಟೀಕಿಸಿದರು.‘ಸಿದ್ದರಾಮಯ್ಯರವರ ಆಡಳಿತದಲ್ಲಿ ರಾಜ್ಯವು ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಆದರೆ ಇದನ್ನು ಸಹಿಸದ ಬಿಜೆಪಿ ಕೆಲವು ಸಮಾಜ ವಿರೋಧಿ ಶಕ್ತಿಗಳಿಗೆ ಬೆಂಬಲ ನೀಡುವ ಮೂಲಕ ರಾಜ್ಯದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದೆ. ಆಡಳಿತ ನಡೆಸು ವಾಗ ಕೆಲವೊಂದು ತಪ್ಪುಗಳಾಗುವುದು ಸಹಜ. ಆದರೆ, ವಿರೋಧ ಪಕ್ಷವಾಗಿ ರುವ ಬಿಜೆಪಿ ಆ ತಪ್ಪುಗಳನ್ನು ತಿಳಿಸಿ ಆಡ ಳಿತವನ್ನು ಸರಿದಾರಿಗೆ ತರುವ ಕೆಲಸ ಮಾಡದೆ ಒಳಸಂಚು ರೂಪಿಸುವ ಮೂಲಕ ಸರ್ಕಾರಕ್ಕೆ ಅಪಕೀರ್ತಿ ತರಲು ಪ್ರಯತ್ನಿಸುತ್ತಿದೆ’ ಎಂದರು.‘ಕೆಲವು ಅಧಿಕಾರಿಗಳು ನಿಯಮ ಮೀರಿ ವರ್ತಿಸುವ ಮೂಲಕ ರಾಜಕೀಯ ನಡೆಸುತ್ತಿದ್ದಾರೆ. ಇದರಿಂದ ಈ ರೀತಿ ಯಾಗುತ್ತಿದೆ’ ಎಂದು ರಾಜೀನಾಮೆ ನೀಡಿದ ಡಿವೈಎಸ್ಪಿ ಅನುಪಮಾ ಶೆಣೈ ಬಗ್ಗೆ ಕೇಳಲಾದ ಪ್ರಶ್ನೆಯೊಂದಕ್ಕೆ ಐವನ್ ಡಿಸೋಜ ಉತ್ತರಿಸಿದರು.ಪತ್ರಿಕಾಗೋಷ್ಠಿಯಲ್ಲಿ ಉಪ್ಪಿನಂಗಡಿ- ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಚಂದ್ರ ಆಳ್ವ, ಉಪ್ಪಿನಂಗಡಿ ವಲಯ ಕಾಂಗ್ರೆಸ್ ಅಧ್ಯಕ್ಷ ರಘುನಾಥ್ ರೈ, ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಬ್ದುಲ್ ರಹಿಮಾನ್, ದ.ಕ. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸೋಮನಾಥ, ಯುವ ಕಾಂಗ್ರೆಸ್ ಕಾರ್ಯದರ್ಶಿ ಯು.ಟಿ. ತೌಸೀಫ್, ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ನಝೀರ್ ಮಠ, ಯುವ ಕಾಂಗ್ರೆಸ್ ವಲಯಾಧ್ಯಕ್ಷ ಶಬ್ಬೀರ್ ಕೆಂಪಿ ಇದ್ದರು.***

ಬಿಜೆಪಿಯನ್ನು ಪ್ರತಿನಿಧಿಸುವ ರಾಜ್ಯದ ಸಂಸದರೂ ಮಹಾದಾಯಿ ಸಮಸ್ಯೆ ಪರಿಹಾರಕ್ಕೆ ಸಂಸತ್ತಿನಲ್ಲಿ ಧ್ವನಿ ಎತ್ತಿಲ್ಲ.

ಐವನ್ ಡಿಸೋಜ, ವಿಧಾ ನ ಪರಿಷತ್ ಮುಖ್ಯ ಸಚೇತಕ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.