ಭಾನುವಾರ, ಜೂನ್ 13, 2021
25 °C

‘ಮಾಜಿ ಶಾಸಕರಿಂದ ಜನವಿರೋಧಿ ನೀತಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಅಭಿವೃದ್ಧಿಗೆ ಪೂರಕವಾಗಿ ತೀರ್ಥಹಳ್ಳಿ, ಆಗುಂಬೆ, ಉಡುಪಿ, ಮಲ್ಪೆ ರಾಷ್ಟ್ರೀಯ ಹೆದ್ದಾರಿಯಾಗಿ   ಮೇಲ್ದ­ರ್ಜೆ­ಗೆ ಏರಿಸುವ ಬಗ್ಗೆ ಮಾಜಿ ಶಾಸಕ ರಘುಪತಿ ಭಟ್ ಅಪಸ್ವರ ಎತ್ತಿರುವುದು ಅವರ ಜನವಿರೋಧಿ ನೀತಿಯನ್ನು ಬಿಂಬಿಸುತ್ತಿದೆ. ಅಭಿವೃದ್ಧಿ ನಡೆಯುವಾಗ ಅಲ್ಪ ಮಟ್ಟಿನ ಅನಾನುಕೂಲತೆ ಸಹಜ ಎಂದು ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.ಉಡುಪಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಕಾಂಗ್ರೆಸ್ ಸರ್ವ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.ಭೂಮಿ ಕಳೆದುಕೊಳ್ಳುವ ಸಂತ್ರಸ್ತರಿಗೆ ಮಾರುಕಟ್ಟೆ ದರದ ಎರಡರಷ್ಟು ಅಧಿಕ ಪರಿಹಾರ ನೀಡಲಾಗುತ್ತದೆ. ಬಿಜೆಪಿ ಆಡಳಿತಾವಧಿಯಲ್ಲಿ ಮಾರ್ಗಗಳನ್ನು ವಿಸ್ತರಣೆ ಮಾಡುವಾಗ ಕಂಡು ಬಾರ­ದಿದ್ದ ಈ ಪ್ರತಿಭಟನೆಯ ಕೂಗು, ಈಗ ಕೇಳಿ ಬರುತ್ತಿರುವುದು ವಿಪರ್ಯಾಸ ಎಂದರು.ಸಂಸದನಾಗಿ ಎರಡು ವರ್ಷಗಳ ಅವಧಿಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ರಸ್ತೆ ಹಾಗೂ ರೈಲ್ವೆ ಸಂಪರ್ಕ, ವಿವಿಧ ಗ್ರಾಮಗಳ ಸಂಪರ್ಕ, ಸೇತುವೆಗಳ ನಿರ್ಮಾಣ, ಅಭಿವೃದ್ಧಿ ಕಾಮಗಾರಿ­ಗಳನ್ನು ಮಾಡಿದ ಸಂತೃಪ್ತಿ ಇದೆ. ಇನ್ನೂ ಹೆಚ್ಚಿನ ಅಭಿವೃದ್ಧಿಗಾಗಿ ಜನತೆ ನನ್ನನ್ನು ಬೆಂಬಲಿಸುತ್ತಾರೆ ಎಂಬ ಭರವಸೆ ಇದೆ ಎಂದು ಅವರು ಹೇಳಿದರು.ಮಾರ್ಚ್‌ 15ರಂದು ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು. ಪ್ರತಿ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ ಸಾರ್ವಜನಿಕ ಸಭೆ ನಡೆಸಲಾಗುವುದು ಎಂದು ಜಿಲ್ಲಾ ಅಧ್ಯಕ್ಷ ಕೆ.ಗೋಪಾಲ ಪೂಜಾರಿ ಹೇಳಿ­ದರು.ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ಎರಡು ವರ್ಷಗಳ ಅಲ್ಪಾ­ವಧಿಯಲ್ಲಿ ಹೆಗ್ಡೆ ಅವರು ಮಾಡಿದ ಸಾಧನೆಯನ್ನು ಜನತೆಗೆ ಮನವರಿಕೆ ಮಾಡಿಕೊಡಬೇಕಿದೆ. ಕ್ಷೇತ್ರದ ಸರ್ವಾಂ­ಗಿಣ ಅಭಿವೃದ್ಧಿಗೆ ತೊಡಗಿಸಿಕೊಂಡ ಹೆಗ್ಡೆಯವರನ್ನು ಕಳೆದ ಬಾರಿಗಿಂತ ಹೆಚ್ಚಿನ ಮತದಿಂದ ಗೆಲ್ಲಿಸಬೇಕು ಎಂದರು.ಶಾಸಕ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಬಸವರಾಜ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆವೆರೋನಿಕಾ ಕರ್ನೇಲಿಯೋ, ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಅಶೋಕ್ ಕುಮಾರ್ ಕೊಡ­ವೂರು, ಕಿಸಾನ್ ಘಟಕದ ಜಿಲ್ಲಾಧ್ಯಕ್ಷ ಶಶಿಧರ ಶೆಟ್ಟಿ ಎಲ್ಲೂರು, ಎಸ್.ಸಿ. ಘಟಕದ ಅಧ್ಯಕ್ಷ ಎಸ್. ನಾರಾಯಣ, ಜಿಲ್ಲಾ ಹಿಂದುಳಿದವರ ಘಟಕದ ಅಧ್ಯಕ್ಷ ಕೇಶವ ಎಂ. ಕೋಟ್ಯಾನ್, ಕೆಪಿಸಿಸಿ ಕಾರ್ಯದರ್ಶಿ ಶ್ಯಾಮಲ ಭಂಡಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನೀರೆ ಕೃಷ್ಣ ಶೆಟ್ಟಿ ಹೆಬ್ರಿ, ಸುಧಾಕರ ಕೋಟ್ಯಾನ್ ಕಾರ್ಕಳ, ಸುಧೀರ್ ಹೆಗ್ಡೆ ಹಿರಿಯಡ್ಕ, ನವೀನ್ ಶೆಟ್ಟಿ ಕಾಪು ಬ್ಲಾಕ್, ಶಂಕರ್ ಕುಂದರ್ ಕೋಟ, ಸಂಪಿಗೇಡಿ ಸಂಜೀವ ಶೆಟ್ಟಿ ವಂಡ್ಸೆ, ಮಲ್ಯಾಡಿ ಶಿವರಾಮ ಶೆಟ್ಟಿ ಕುಂದಾಪುರ, ರಾಜೇಶ್ ಶೆಟ್ಟಿ ಬಿರ್ತಿ ಬ್ರಹ್ಮಾವರ ಮತ್ತಿತರರು ಉಪ­ಸ್ಥಿತ­ರಿದ್ದರು.ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ. ನರಸಿಂಹಮೂರ್ತಿ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಯಡ್ತರೆ ರಾಜು ಪೂಜಾರಿ ವಂದಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.