ಶುಕ್ರವಾರ, ಜೂನ್ 18, 2021
25 °C

‘ಮಾಧ್ಯಮಗಳ ಚುನಾವಣಾ ಸಮೀಕ್ಷೆ ಬುಡಮೇಲು’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಿರಿಯೂರು: ಚುನಾವಣೆಗೆ ಮೊದಲು ತಮ್ಮದೇ ಆದ ರೀತಿಯಲ್ಲಿ ವಿವಿಧ ರಾಜಕೀಯ ಪಕ್ಷಗಳು ಗೆಲ್ಲಬಹುದಾದ ಸ್ಥಾನ ಕುರಿತು ಸಮೀಕ್ಷೆ ನಡೆಸುತ್ತಿರುವ ಕೆಲವು ಮಾಧ್ಯಮಗಳ ವಿಶ್ವಾಸಾರ್ಹತೆಯನ್ನೇ ಪ್ರಶ್ನಿಸುವಂತಹ ವಾತಾವರಣ ಸೃಷ್ಟಿಯಾಗಿದೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಹೇಳಿದರು.ತಾಲ್ಲೂಕಿನಲ್ಲಿ ಈಚೆಗೆ ಸುರಿದ ಅಕಾಲಿಕ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶನಿವಾರ ಭೇಟಿ ನೀಡಿದ ನಂತರ ಹಿರಿಯೂರಿನಲ್ಲಿ ಸುದ್ದಿಗಾರರ ಜತೆ ಅವರು ಮಾತನಾಡಿದರು.ಮಾಧ್ಯಮಗಳು ಬಿತ್ತರಿಸುತ್ತಿರುವ ಸಮೀಕ್ಷೆಯ ಪ್ರಭಾವ ಜನರ ಮನಸುಗಳ ಮೇಲೆ ಎಷ್ಟರಮಟ್ಟಿಗೆ ಆಗುತ್ತದೆ ಎನ್ನುವುದನ್ನು ಖಚಿತವಾಗಿ ಹೇಳಲಾಗದು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಎಲ್ಲರ ನಿರೀಕ್ಷೆಯನ್ನು ಹುಸಿಗೊಳಿಸಿ ಅತೀ ಹೆಚ್ಚಿನ ಸ್ಥಾನ ಗೆಲ್ಲಲಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಆಕಾಂಕ್ಷಿಗಳ ದೊಡ್ಡ ಪಟ್ಟಿಯೇ ಇತ್ತು. ಹೈಕಮಾಂಡ್ ಲಿಡ್ಕರ್ ಸಂಸ್ಥೆ ಮಾಜಿ ಅಧ್ಯಕ್ಷ ಚಂದ್ರಪ್ಪ ಅವರಿಗೆ ಹಸಿರು ನಿಶಾನೆ ಸೂಚಿಸಿದ್ದು ಅವರ ಪರವಾಗಿ ಎಲ್ಲರೂ ಕೆಲಸ ಮಾಡಿ ಗೆಲ್ಲಿಸುತ್ತೇವೆ.  ಚಂದ್ರಪ್ಪ ಅತ್ಯಂತ  ಸುಸಂಸ್ಕೃತ ವ್ಯಕ್ತಿ  ಎಂದು ಅವರು  ಹೇಳಿದರು.ತುಮಕೂರು ಕ್ಷೇತ್ರಕ್ಕೆ ನಿಮ್ಮ ಮಗ ಸಂತೋಷ್‌ಗೆ ಟಿಕೆಟ್ ಏಕೆ ಸಿಗಲಿಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ, ‘ಕಾಂಗ್ರೆಸ್ ಪಕ್ಷ ದೊಡ್ಡ ಹಡಗು. ಇಲ್ಲಿ ಕಾರಣ ಹುಡುಕುವ ಬದಲು ಪಕ್ಷ ಒಪ್ಪಿದವರಿಗೆ ಕೆಲಸ ಮಾಡುವುದು ನಮ್ಮ ಕರ್ತವ್ಯ. ಮಗನಿಗೆ ಇನ್ನೂ ಅವಕಾಶಗಳಿವೆ’ ಎಂದು ಜಯಚಂದ್ರ ಉತ್ತರಿಸಿದರು.ಹಿರಿಯೂರು ತಾಲ್ಲೂಕಿನ ಧರ್ಮಪುರ ಮತ್ತು ಐಮಂಗಲ ಹೋಬಳಿಯ ಗ್ರಾಮಗಳಲ್ಲಿ  ಅಕಾಲಿಕ ಮಳೆಯಿಂದ ಭಾರಿ ಪ್ರಮಾಣದ ಹಾನಿಯಾಗಿರುವುದು ಇಂದು ರೈತರ ಜಮೀನುಗಳಿಗೆ ಭೇಟಿ ನೀಡಿದಾಗ ತಿಳಿದು ಬಂತು. ಚುನಾವಣಾ ನೀತಿಸಂಹಿತೆ ಜಾರಿಯಲ್ಲಿರುವ ಕಾರಣ ಏನೂ ಹೇಳಲಾಗದು. ರೈತರಿಂದ ಆಗಿರುವ ನಷ್ಟದ ಬಗ್ಗೆ ಮಾಹಿತಿ ಪಡೆದಿರುವೆ ಎಂದು ಅವರು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.