ಬಾಗಲಕೋಟೆ: ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ಪ್ರತಿಯೊಬ್ಬ ಸರ್ಕಾರಿ ಅಧಿಕಾರಿಯೂ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮನೋಜ್ ಜೈನ್ ಸೂಚಿಸಿದರು. ನವನಗರದ ಜಿಲ್ಲಾ ಪಂಚಾಯ್ತಿ ಸಭಾಭವನದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಮಾನವ ಹಕ್ಕುಗಳ ಆಯೋಗವು ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಾಗರಿಕರಿಗೆ, ದಲಿತರಿಗೆ ಹಾಗೂ ಮಹಿಳೆಯರಿಗೆ ದೊರೆಯಬೇಕಾದ ಸೌಲಭ್ಯಗಳನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ತಲುಪಿಸಬೇಕು, ಇವುಗಳಿಗೆ ಚ್ಯುತಿಯಾದರೆ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಅಧಿಕಾರಿಗಳು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಮಾನವ ಹಕ್ಕುಗಳು ರಕ್ಷಣೆಯಾಗುವಂತೆ ಕಾರ್ಯ ನಿರ್ವಹಿಸಬೇಕು ಎಂದರು.

ಸಂವಿಧಾನಾತ್ಮಕ ಹಾಗೂ ಕಾನೂನಾತ್ಮಕ ಹಕ್ಕುಗಳ ಹೊರತು ಪಡಿಸಿ ಉಳಿದೆಲ್ಲವುಗಳು ಮಾನವ ಹಕ್ಕುಗಳ ವ್ಯಾಪ್ತಿಯೊಳಪಡುತ್ತವೆ. ಎಲ್ಲ ಧರ್ಮಗಳು ಹೇಳುವಂತೆ ಪ್ರತಿ ಯೊಬ್ಬರೂ ದಯೆ ಹಾಗೂ ಮಾನವೀ ಯತೆ ಹೊಂದಬೇಕು ಎಂದರು. ಕಾರ್ಯಕ್ರಮ ಉದ್ಘಾಟಿಸಿ ಮಾತ ನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ಬನಸೋಡೆ, ಜೀವಿಸುವ ಹಕ್ಕು, ಮಾನವ ಘನತೆಯ ಹಕ್ಕು, ಸಮಾ ನತೆಯ ಹಕ್ಕು, ವೈಯಕ್ತಿಕ ಸ್ವಾತಂತ್ರ್ಯದ ಹಕ್ಕು, ಗುಲಾಮಗಿರಿ ವಿರುದ್ಧ ಹಕ್ಕು, ಆರೋಗ್ಯ ಹಕ್ಕು, ಶಿಕ್ಷಣ ಹಕ್ಕು ಸಂವಿಧಾನವು ಎಲ್ಲರಿಗೂ ಕಲ್ಪಿಸಿದ್ದು, ಅವುಗಳ ಉಲ್ಲಂಘನೆಯಾಗದಂತೆ ಎಚ್ಚರ ವಹಿಸಬೇಕು ಎಂದು ಹೇಳಿದರು.

ಸಾಮಾನ್ಯವಾಗಿ ಪೊಲೀಸರಿಂದ ಚಿತ್ರಹಿಂಸೆ, ಕಾನೂನುಬಾಹಿರ ಬಂಧನ, ದಸ್ತಗಿರಿ, ವಿಚಾರಣಾಧೀನ ಸಾವು, ಜೀತದಾಳು, ಭಯೋತ್ಪಾದನೆ, ಬಾಲ ಕಾರ್ಮಿಕ ಪದ್ಧತಿ, ಮಹಿಳೆ ಮತ್ತು ಮಕ್ಕಳ ಮೇಲೆ ಲೈಂಗಿಕ ಕಿರುಕುಳ, ಎಚ್ಐವಿ ಭಾದಿತರಿಗೆ ಭೇದಭಾವ, ಜನಾಂಗೀಯ ನಿಂಧನೆಯು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂದರು.

ಜಿ.ಪಂ ಸಿಇಓ ಎಸ್.ಜಿ.ಪಾಟೀಲ, ಮಾನವ ಹಕ್ಕುಗಳ ಉಲ್ಲಂಘನೆಯಾಗ ದಂತೆ ಎಲ್ಲರೂ ಬದುಕಬೇಕು ಮತ್ತು ಸರ್ಕಾರ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು. ಮಾನವ ಹಕ್ಕುಗಳ ಉಲ್ಲಂಘನೆ ತಡೆಯಲು,ಉಲ್ಲಂಘನೆಯಾದವರಿಗೆ ರಕ್ಷಣೆ ಮತ್ತು ನೆರವು ನೀಡಲು ಜಿಲ್ಲಾ ಮಟ್ಟ, ರಾಜ್ಯ ಮಟ್ಟದಲ್ಲಿ ಮಾನವ ಹಕ್ಕುಗಳ ಆಯೋಗ ರಚಿಸಲಾಗಿದೆ ಎಂದರು.

ಮಾನವ ಹಕ್ಕುಗಳ ಸೇವಾ ಸಂಸ್ಥೆಯ ಅಧ್ಯಕ್ಷ ಎಸ್.ಬಿ.ಗರಣಿ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಹೆಚ್ಚವರಿ ಜಿಲ್ಲಾಧಿಕಾರಿ ಪಿ.ಟಿ. ರುದ್ರಗೌಡ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.