ಚಿಕ್ಕನಾಯಕನಹಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಡಿ.15ಕ್ಕೆ ತುಮಕೂರಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಎಲ್ಲ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಹಿರಿಯ ಅಧಿಕಾರಿಗಳಿಗೆ ಅಗತ್ಯ ಮಾಹಿತಿ ಒದಗಿಸಬೇಕು ಎಂದು ತಹಶೀಲ್ದಾರ್ ಕಾಮಾಕ್ಷಮ್ಮ ಸೂಚಿಸಿದರು.

ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಬುಧವಾರ ನಡೆದ ವಿವಿಧ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಸಾರ್ವಜನಿಕರು ಸಲ್ಲಿಸಿದ ಅಹವಾಲುಗಳನ್ನು ಇತ್ಯರ್ಥಪಡಿಸದಿದ್ದರೆ ಸಂಬಂಧಿಸಿದ ಅಧಿಕಾರಿಗಳೇ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದರು.

ಬರ ಪರಿಹಾರ ಕಾಮಗಾರಿ, ಕುಡಿಯುವ ನೀರು ಪೂರೈಕೆ, ಮೇವಿನ ಸಮಸ್ಯೆ, ಗಂಗಾ ಕಲ್ಯಾಣ ಯೋಜನೆ ಅನುಷ್ಠಾನ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಬೇಕು ಎಂದು ಹೇಳಿದರು.

ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಎಚ್.ಕೃಷ್ಣಾನಾಯ್ಕ, ಶಿರಸ್ತೇದಾರ್ ದೊಡ್ಡಮಾರಯ್ಯ, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶಶೆಟ್ಟಿ, ಸಿಡಿಪಿಒ ಅನಿಸ್ ಖೈಸರ್, ಕ್ಷೇತ್ರ ಶಿಕ್ಷಣಾಧಿಕಾರಿ ಸಾ.ಚಿ.ನಾಗೇಶ್, ಜಿ.ಪಂ. ಕಾರ್ಯನಿರ್ವಾಹಕ ಎಂಜಿನಿಯರ್ ಚಿಕ್ಕದಾಸಪ್ಪ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.