ಗುರುವಾರ , ಜೂನ್ 24, 2021
23 °C

‘ಮಾಹಿತಿ ಹಕ್ಕು ಕಾಯ್ದೆ ಅರಿವು ಅವಶ್ಯ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಆಡಳಿತ ಯಂತ್ರದಲ್ಲಿ ಪಾರದರ್ಶಕತೆ ಮೂಡಿಸಲು ಮತ್ತು ಭ್ರಷ್ಟಾ­ಚಾರವನ್ನು ದೂರ ಮಾಡುವ ದೃಷ್ಟಿ­ಯಿಂದ ಸರ್ಕಾರ ಜಾರಿಗೊಳಿಸಿ­ರುವ ಮಾಹಿತಿ ಹಕ್ಕು ಕಾಯ್ದೆ ಬಹ­ಳಷ್ಟು ಉಪಯುಕ್ತವಾಗಿದೆ. ಈ ಬಗ್ಗೆ ಪ್ರತಿಯೊಬ್ಬ ವಿದ್ಯಾರ್ಥಿಯೂ ಹೆಚ್ಚಿನ ಅರಿವು ಮೂಡಿಸಿಕೊಳ್ಳಬೇಕು ಎಂದು ಚನ್ನಪಟ್ಟಣ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಜಿ.ಎಂ.ಜಯ­ರಾಮಯ್ಯ  ಹೇಳಿದರು.ಸರ್ಕಾರಿ ಪ್ರಥಮ ದರ್ಜೆ ಕಾಲೇಜಿ­ನಲ್ಲಿ ರಾಜ್ಯಶಾಸ್ತ್ರ ವಿಭಾಗ­ದಿಂದ ಆಯೋಜಿಸ ಲಾಗಿದ್ದ 'ಮಾಹಿತಿ ಹಕ್ಕು ಕಾಯ್ದೆ'ಯ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಪ್ರತಿಯೊಂದು ಸರ್ಕಾರಿ ಇಲಾಖೆ ಮತ್ತು ಸರ್ಕಾರದಿಂದ ಸೌಲಭ್ಯ ಪಡೆದು ನಡೆ ಯುತ್ತಿರುವ ಸಂಘ ಸಂಸ್ಥೆಗಳಲ್ಲಿ ಮಾಹಿತಿ ಹಕ್ಕು ಅಧಿ ನಿಯಮದಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದರು.ಕಾಲೇಜಿನ ಪ್ರಾಂಶುಪಾಲ ಪ್ರೊ.ಡಿ.­ರಂಗ­ಸ್ವಾಮಿ ಗೌಡ ಮಾತನಾಡಿ, ಮಾಹಿತಿ ಹಕ್ಕು ಕಾಯ್ದೆ  ಅಡಿಯಲ್ಲಿ ದೇಶದ ರಕ್ಷಣೆ, ಧರ್ಮದ ರಕ್ಷಣೆ ಹಾಗೂ ಕೆಲವು ನ್ಯಾಯಾಂಗ ಇಲಾಖೆಗೆ ಸಂಬಂಧಿಸಿದ ವಿಷಯ ಹೊರತುಪಡಿಸಿ ಉಳಿದೆಲ್ಲಾ ವಿಷಯಗಳ ಬಗ್ಗೆ ಕಾಯ್ದೆಯಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಿ.ಜಿ.ಸುಮಾ, ಸಮಾಜ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಮೋಹನ್ ದಾಸ್, ಅಂಬುಜಾ ಇತರರು ಪಾಲ್ಗೊಂಡಿದ್ದರು. ವಿದ್ಯಾರ್ಥಿನಿ ಭವ್ಯ ಪ್ರಾರ್ಥಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.