ಬೆಂಗಳೂರು: ಸಾಮಾನ್ಯವಾಗಿ ಹಣ ಬಲ, ತೋಳ್ಬಲದ ಮೇಲೆ ಚುನಾವಣೆ ಗಳು ನಡೆಯುತ್ತವೆ. ಇಂತಹ ಪರಿಸ್ಥಿತಿ ಯಲ್ಲಿ ಮಹಿಳೆ ಯರು ಪುರುಷರ ವಿರುದ್ಧ ಸ್ಪರ್ಧಿಸಿ, ಗೆಲ್ಲುವುದು ಸುಲಭ ವಲ್ಲ. ಅದಕ್ಕಾಗಿಯೇ ಮಹಿಳೆಯರಿಗೆ ರಾಜಕೀಯ ಮೀಸಲಾತಿ ಅಗತ್ಯ ಇದೆ ಎಂದು ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಓಜಾ ಅಭಿಪ್ರಾಯಪಟ್ಟರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳೆಯರ ಸಬಲೀಕರಣಕ್ಕೆ ಒತ್ತು ನೀಡುತ್ತಿರುವ ಕಾಂಗ್ರೆಸ್ ಪಕ್ಷದಲ್ಲೂ ಮೀಸಲಾತಿ ಇಲ್ಲದೆ ಮಹಿಳೆಯರಿಗೆ ಹೆಚ್ಚಿನ ಸೀಟು ನೀಡಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಯುಪಿಎ ಸರ್ಕಾರ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಆದ್ಯತೆ ನೀಡುವ ಮಹಿಳಾ ಮೀಸಲಾತಿ ಮಸೂದೆಯನ್ನು ಈ ಅಧಿವೇಶನದಲ್ಲೇ ಮಂಡಿಸಲಿದೆ ಎಂದರು.

ಎಲ್ಲ ಪಕ್ಷಗಳು ಅಧಿಕಾರಕ್ಕೆ ಬರುವ ಉದ್ದೇಶದಿಂದಲೇ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುತ್ತವೆ. ಇಂತಹ ಸಂದರ್ಭದಲ್ಲಿ ಪಕ್ಷಗಳು ಮಹಿಳೆಯರಿಗೆ ಅವಕಾಶ ನೀಡಲು ಬಯಸಿದರೂ ಅದು ಸಾಧ್ಯವಾಗುವು ದಿಲ್ಲ.

ಕಾಂಗ್ರೆಸ್ ಆಡಳಿತ ವಿರುವ ರಾಜ್ಯಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾ ವಣೆಯಲ್ಲಿ ಮಹಿಳೆಯರಿಗೆ ಶೇ೫೦ರಷ್ಟು ಮೀಸಲಾತಿ ನೀಡಲಾಗಿದೆ. ಗುಜರಾತ್ ನಲ್ಲಿ ಮಹಿಳಾ ಮೀಸಲಾತಿ ಇಲ್ಲ ಎಂದರು. ರಾಜ್ಯ ಮಹಿಳಾ ಘಟಕದ ರಾಜ್ಯ ಕಾರ್ಯ ಕಾರಿಣಿಸಭೆ ಬೆಲ್ ಹೋಟೆಲ್ ನಲ್ಲಿ ಶುಕ್ರವಾರ (ಡಿ.13) ನಡೆಯಲಿದೆ ಎಂದರು.

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ನಾಯ್ಡು, ಮಾಜಿ ಸಚಿವೆ ರಾಣಿ ಸತೀಶ್, ವಿಧಾನಪರಿಷತ್ ಮಾಜಿ ಸದಸ್ಯೆ ಜಲಜಾ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.