‘ಮುಖ್ಯ ಶಿಕ್ಷಕ ಹುದ್ದೆಗೆ ಬಡ್ತಿ ಪ್ರಕ್ರಿಯೆ ಪೂರ್ಣ’

ಹುಬ್ಬಳ್ಳಿ: ‘ಮುಖ್ಯ ಶಿಕ್ಷಕ ಹುದ್ದೆಗೆ ಬಡ್ತಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ನೇಮಕ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮಂಜೂರಾತಿಗಾಗಿ ಆರ್ಥಿಕ ಇಲಾಖೆಗೆ ಕಳುಹಿಸಲಾಗಿದೆ’ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಶನಿವಾರ ಇಲ್ಲಿ ತಿಳಿಸಿದರು.
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಏರ್ಪಡಿಸಿದ್ದ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ‘ಎರಡು ವರ್ಷಗಳ ಒಳಗೆ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಲು ಮತ್ತು ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತೇನೆ’ ಎಂದು ಭರವಸೆ ನೀಡಿದರು.
‘ನಿವೃತ್ತ ಶಿಕ್ಷಕರನ್ನು ಸತಾಯಿಸು ವುದು ಸರಿಯಲ್ಲ. ನಿವೃತ್ತಿಯಾದ ದಿನವೇ ಅವರು ತಮಗೆ ಬರಬೇಕಾದ ಹಣ ವನ್ನು ತೆಗೆದುಕೊಂಡು ಮನೆಗೆ ಹೋಗು ವಂತಾಗಬೇಕು. ಆದ್ದರಿಂದ ನಿವೃತ್ತಿ ಅಂಚಿನಲ್ಲಿರುವ ಶಿಕ್ಷಕರ ಮಾಹಿತಿಯನ್ನು ಆರು ತಿಂಗಳ ಮೊದಲೇ ಸಂಗ್ರಹಿಸಿ, ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದರು.
‘ಶಾಲೆಯೊಂದರ ಅನುದಾನಕ್ಕೆ ಸಂಬಂಧಿಸಿದ ವರದಿ ನೀಡುವಾಗ ಒಬ್ಬರು ಆ ಶಾಲೆಯ ಸಾಧನೆ ಶೇ 60 ಎಂದು ತಿಳಿಸಿದ್ದರೆ, ಇನ್ನೊಬ್ಬರು ಶೇ 30 ಎಂದು ನಮೂದಿಸಿದ್ದರು. ಇಂತಹ ಭಿನ್ನ ವರದಿಗೆ ಭ್ರಷ್ಟಾಚಾರ ಕಾರಣ’ ಎಂದ ಸಚಿವರು, ‘ಎಲ್ಲ ಶಾಲೆಗಳಿಗೆ ಖುದ್ದು ಭೇಟಿ ನೀಡಬೇಕೆಂದು ನಿರ್ಧರಿಸಿದ್ದೇನೆ. ತಪ್ಪು ಮಾಹಿತಿ ನೀಡುವ ಅಧಿಕಾರಿಗಳನ್ನು ಮನೆಗೆ ಕಳುಹಿಸುತ್ತೇನೆ.
ನಾನು ಏನನ್ನೂ ಕೇಳಲ್ಲ, ನೀವೂ ಯಾರಿಗೂ ಕೊಡಬೇಡಿ. ಯಾರಾದರೂ ಏನಾದರೂ ಕೇಳಿದರೆ ನೇರವಾಗಿ ಪತ್ರ ಬರೆಯಿರಿ. ನಾನು ನೋಡಿಕೊಳ್ಳುತ್ತೇನೆ’ ಎಂದು ಗುಡುಗಿದರು.
ಪ್ರತಿ ತರಗತಿಗೆ ಒಬ್ಬರು ಶಿಕ್ಷಕರನ್ನು ನೇಮಿಸಬೇಕು, ಪ್ರತಿ ಪ್ರಾಥಮಿಕ ಶಾಲೆಯಲ್ಲೂ ಪೂರ್ವ ಪ್ರಾಥಮಿಕ ಶಾಲೆ ಆರಂಭಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಮನವಿಯನ್ನು ಸಂಘದ ಅಧ್ಯಕ್ಷ ಬಸವರಾಜ ಗುರಿಕಾರ ಸಚಿವರಿಗೆ ನೀಡಿದರು
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.