ಬುಧವಾರ, ಜನವರಿ 22, 2020
18 °C

‘ಮೂಢನಂಬಿಕೆ ವಿರುದ್ಧ ಜಾಗೃತಿ ಮೂಡಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀರಂಗಪಟ್ಟಣ: ಜನರು ವಿದ್ಯಾವಂತರಾದಷ್ಟೂ ಮೌಢ್ಯ ಆಚರಣೆ ಹೆಚ್ಚುತ್ತಿದ್ದು, ಅದರ ಪರಿಣಾಮ ಕುರಿತು ಜನರಲ್ಲಿ ಜಾಗೃತಿ ಮಾಡಿಸಲು ಪರಿಣಾಮಕಾರಿ ಕಾರ್ಯಕ್ರಮ ರೂಪಿಸಬೇಕು ಎಂದು ಶಿಕ್ಷಣ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ಎನ್‌. ಕುಮಾರಸ್ವಾಮಿ ಸಲಹೆ ನೀಡಿದರು.ರಾಷ್ಟ್ರೀಯ ಗಣಿತ ವರ್ಷಾಚರಣೆ ಅಂಗವಾಗಿ ಪಟ್ಟಣದ ಸರ್ಕಾರಿ ಜೂನಿಯರ್‌ ಕಾಲೇಜಿನಲ್ಲಿ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಘಟಕ, ಸ್ಥಳೀಯ ವಿಜ್ಞಾನ ಕೇಂದ್ರ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಶನಿವಾರ ಏರ್ಪಡಿಸಿದ್ದ ಸಂಪನ್ಮೂಲ ವ್ಯಕ್ತಿಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಸಿ.ಪುಟ್ಟಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಎನ್‌.ಮಹದೇವಪ್ಪ ಮಾತನಾಡಿದರು. ರಾಜ್ಯ ವಿಜ್ಞಾನ ಪರಿಷತ್‌ ನಿರ್ದೇಶಕ ಅರಳಕುಪ್ಪೆ ನಾಗೇಶ್‌, ಶ್ರೀರಂಗರಾಜಲಕ್ಷ್ಮಿ, ಸಂತೋಷ್‌ಕುಮಾರ್‌, ಶಿವಕುಮಾರ್‌, ಚಂದ್ರಶೇಖರಯ್ಯ ಇದ್ದರು.

ಪ್ರತಿಕ್ರಿಯಿಸಿ (+)