ಶುಕ್ರವಾರ, ಜೂನ್ 25, 2021
29 °C

‘ಮೋದಿಯನ್ನು ಪ್ರಧಾನಿಯನ್ನಾಗಿಸಲು ಬಿಜೆಪಿ ಬೆಂಬಲಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗೋಕಾಕ: ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡಲು ಬಿಜೆಪಿ ಪಕ್ಷವನ್ನು ಬೆಂಬಲಿಸಿ ಎಂದು ಬಿಜೆಪಿ ಜಿಲ್ಲಾ  ಸ್ಲಂ ಮೋರ್ಚಾ ಕಾರ್ಯದರ್ಶಿ ಲಕ್ಕಪ್ಪ ತಹಶೀಲದಾರ ಮತಾದರರಲ್ಲಿ ಮನವಿ ಮಾಡಿಕೊಂಡರು.ಇತ್ತೀಚೆಗೆ ನಗರದ  ವಿವಿಧ ವಾರ್ಡ್‌ಗಳಲ್ಲಿ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಅಭ್ಯರ್ಥಿ ಸಂಸದ ಸುರೇಶ ಅಂಗಡಿ ಪರ ಪ್ರಚಾರ ನಡೆಸಿ ಅವರು ಮಾತನಾಡಿದರು,ವಿಶ್ವ ಹಿಂದು ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ನಾರಾಯಣ ಮಠಾಧಿಕಾರಿ ಮಾತನಾಡಿದರು.ಈ ಸಂದರ್ಭದಲ್ಲಿ ನಗರದ ವಿವಿಧ ವಾರ್ಡ್‌ಗಳ ಮನೆ ಮನೆಗೆ ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಕುರಿತು  ಕರಪತ್ರಗಳನ್ನು ಹಂಚಲಾಯಿತು.ಈ ಸಂದರ್ಭದಲ್ಲಿ ನಗರ ಘಟಕದ ಕಾರ್ಯದರ್ಶಿ ಜಗದೀಶ ಸದರಜೋಶಿ, ಮಹಾದೇವ ಅಂಬಲಿ, ಶ್ರೀನಿವಾಸ ವಣ್ಣೂರ, ರಾಹುಲ ಕುಲಕರ್ಣಿ, ಸಮೀರ ಸುಣಧೋಳಿ, ಭುಜಬಲಿ ಖಾರೇಪಠಾಣ ಸೇರಿದಂತೆ ಪಕ್ಷದ ಅನೇಕ  ಕಾರ್ಯಕರ್ತರು ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.