ಬೆಂಗಳೂರು: ‘ನರೇಂದ್ರ ಮೋದಿ ಅವರ ಜನಪ್ರಿಯತೆ ಸಹಿಸದ ಕಾಂಗ್ರೆಸ್ ಮುಖಂಡರು ಅವರ ವಿರುದ್ಧ ಕೀಳುಮಟ್ಟದ ಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ಸಿಗರಿಗೆ ಮೋದಿ ಹೆಸರು ಜಪ ಮಾಡುವುದು ಬಿಟ್ಟು ಬೇರೇನೂ ಕೆಲಸವೇ ಇಲ್ಲ’ ಎಂದು ಶಾಸಕ ಆರ್.ಅಶೋಕ ಗುರುವಾರ ಇಲ್ಲಿ ನೇರ ಆರೋಪ ಮಾಡಿದರು.

ನಟಿ ರಕ್ಷಿತಾ ಅವರನ್ನು ಬಿಜೆಪಿಗೆ ಸೇರಿಸಿಕೊಂಡ ನಂತರ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ‘ಎಲ್ಲ ಸಮೀಕ್ಷೆಗಳಲ್ಲೂ ಮೋದಿ ಅವರೇ ಮುಂದಿನ ಪ್ರಧಾನಿ ಎಂದು ಹೇಳಲಾಗುತ್ತಿದೆ. ಇದು ಕಾಂಗ್ರೆಸ್ಸಿಗರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಮೋದಿ ವಿರುದ್ಧ ಇಲ್ಲಸಲ್ಲದ ಟೀಕೆಗಳನ್ನು ಮಾಡುತ್ತಿದ್ದಾರೆ’ ಎಂದು ಆಕ್ಷೇಪಿಸಿದರು. ‘ಮೋದಿ ಕೋಮುವಾದಿಯಲ್ಲ’ ಎಂದು ಸಮರ್ಥಿಸಿಕೊಂಡ ಅವರು ‘ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ– ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ’ ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.