ಗುರುವಾರ , ಜೂನ್ 17, 2021
28 °C

‘ಮೋದಿ ಪ್ರಧಾನಿಯಾಗಲು ಬಿಜೆಪಿ ಬೆಂಬಲಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾದಾಮಿ: ವಿಶ್ವವೇ ಬೆರಗಾಗುವಂತೆ ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿ ರಾಜ್ಯದ ಅಭಿವೃದ್ಧಿ ಕೈಗೊಂಡಿದ್ದಾರೆ. ಕಾಂಗ್ರೆಸ್‌ ಸರ್ಕಾರದಿಂದ ದೇಶದ ಆರ್ಥಿಕ ಸಂಪತ್ತು ದಿವಾಳಿಯಾಗಿದೆ. ಮೋದಿಗೆ 60 ತಿಂಗಳು ಆಡಳಿತ ನಡೆಸಲು ಕೊಡಿ. ದೇಶದ ಅಭಿವೃದ್ಧಿಗೆ ಹಾಗೂ ನರೇಂದ್ರ ಮೋದಿ ಪ್ರಧಾನಿಯಾಗಲು ಬಾಗಲಕೋಟೆ ಲೋಕಸಭಾ ಮತಕ್ಷೇತ್ರದ ಅಭ್ಯರ್ಥಿ ಪಿ.ಸಿ. ಗದ್ದಿಗೌಡರನ್ನು ಬೆಂಬಲಿಸಲು ಬಿಜೆಪಿಗೆ  ಮತಕೊಡಿ ಎಂದು ಮಾಜಿ ಸಚಿವ ಹಾಗೂ ಶಾಸಕ ಗೋವಿಂದ ಕಾರಜೋಳ ಹೇಳಿದರು.ಇಲ್ಲಿನ ವೀರಪುಲಿಕೇಶಿ ಒಳಾಂಗಣ ಕ್ರೀಡಾಂಗಣದಲ್ಲಿ ಈಚೆಗೆ ಬಾಗಲಕೋಟೆ ಲೋಕಸಭೆ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಚುನಾವಣೆ ಪ್ರಚಾರದ ಅಂಗವಾಗಿ  ಗದ್ದಿಗೌಡರನ್ನು ಎರಡು ಬಾರಿ ಆಯ್ಕೆ ಮಾಡಿದ್ದೀರಿ ಇನ್ನೊಂದು ಬಾರಿ ಆಯ್ಕೆ ಮಾಡಿ ಹ್ಯಾಟ್ರಿಕ್‌ ಸಾಧಿಸಿ ಎಂದು ಕಾರ್ಯಕರ್ತರ ಸಭೆಯಲ್ಲಿ ಅವರು ಹೇಳಿದರು.ದಶಕಗಳಿಂದ ಕೇಂದ್ರದ ಯುಪಿಎ ಸರ್ಕಾರ ದುರ್ಬಲ ಪ್ರಧಾನ ಮಂತ್ರಿಯನ್ನು ಹೊಂದಿದೆ. ಚೀನಾದೇಶದ ಗಡಿ ಆಕ್ರಮಣ ಮತ್ತು ಪಾಕಿಸ್ತಾನವು ಭಾರತೀಯ ಸೈನಿಕರ ಸಿರಚ್ಛೇದನ ಮಾಡಿದರೂ ಸಹ ಪ್ರಧಾನ ಮಂತ್ರಿ ಮನಮೋಹನ ಸಿಂಗ್‌ರ ಮೌನವನ್ನು ಮಾಜಿ ಸಚಿವ ಹಾಗೂ ಶಾಸಕ ಗೋವಿಂದ ಕಾರಜೋಳ ಖಂಡಿಸಿದರು.ಕೇಂದ್ರದಲ್ಲಿ 60 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್‌ ಸರ್ಕಾರ ದೇಶದ ಸಂಪತ್ತನ್ನು ನೆಹರೂ ಮನೆತನದವರು, ನೆಹರೂ ಸೇರಿದಂತೆ ಇಂದಿರಾಗಾಂಧಿ, ರಾಜೀವ ಗಾಂಧಿ, ಸೋನಿಯಾ ಗಾಂಧಿ  ಮತ್ತು ರಾಹುಲ್‌ ಗಾಂಧಿ ಲೂಟಿ ಹೊಡೆದಿದ್ದಾರೆ ಎಂದು ಅವರು ಆರೋಪಿಸಿದರು.ಹತ್ತು ವರ್ಷದಲ್ಲಿ ಬಾಗಲಕೋಟೆ ಲೋಕಸಭೆ ಮತಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಕೈಗೊಂಡಿದ್ದೇನೆ. ಇನ್ನೊಂದು ಬಾರಿ ಆಶೀರ್ವದಿಸಿ ಎಂದು ಸಂಸದ ಪಿ.ಸಿ. ಗದ್ದಿಗೌಡರ ಕಾರ್ಯಕರ್ತರಿಗೆ ವಿನಂತಿಸಿಕೊಂಡರು.ಜಿಲ್ಲಾ ಘಟಕದ ಬಿಜೆಪಿ ಅಧ್ಯಕ್ಷ ರಾಜಶೇಖರ್‌ ಶೀಲವಂತ, ಮೇಲ್ಮನೆ ಸದಸ್ಯ ಜಿ.ಎಸ್‌. ನ್ಯಾಮಗೌಡ, ಮಾಜಿ ಶಾಸಕರಾದ ಎಂ.ಕೆ. ಪಟ್ಟಣಶೆಟ್ಟಿ, ವೀರಣ್ಣ ಚರಂತಿಮಠ, ಸಿದ್ದು ಸವದಿ, ದೊಡ್ಡನಗೌಡ ಪಾಟೀಲ, ಶ್ರೀಕಾಂತ ಕುಲಕರ್ಣಿ ಮಾತನಾಡಿದರು.

ವಿವಿಧ ಗ್ರಾಮಗಳಿಂದ ಕಾರ್ಯಕರ್ತರು ಆಗಮಿಸಿದ್ದರು. ತಾಲ್ಲೂಕು ಘಟಕದ ಅಧ್ಯಕ್ಷ ಶಾಂತಗೌಡ ಪಾಟೀಲ ಸ್ವಾಗತಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.