ಭಾನುವಾರ, ಮಾರ್ಚ್ 7, 2021
24 °C

‘ಮೋದಿ ಸಂಪುಟದಲ್ಲಿ ಶೋಭಾಗೆ ಸ್ಥಾನ ಸಿಗಲಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ಮೋದಿ ಸಂಪುಟದಲ್ಲಿ ಶೋಭಾಗೆ ಸ್ಥಾನ ಸಿಗಲಿ’

ಬಾಗಲಕೋಟೆ: ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ದೊರಕಲಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷೆ ಗೀತಾ ವಿವೇಕಾನಂದ ತಿಳಿಸಿದರು.ನಗರದ ಬಿವಿವಿ ಸಂಘದ ಮಿನಿ ಸಭಾಭವನ­ದಲ್ಲಿ ಬುಧವಾರ ಆಯೋಜಿಸಿದ್ದ ಬಿಜೆಪಿ  ಮಹಿಳಾ ಮೋರ್ಚಾ ಘಟಕದ ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ಮೋದಿ ನೇತೃತ್ವದ ಕೇಂದ್ರದ ಸಚಿವ ಸಂಪುಟದಲ್ಲಿ ಶೋಭಾ ಕರಂದ್ಲಾಜೆಗೆ ಸೂಕ್ತ ಸ್ಥಾನ ಸಿಗಬೇಕು ಎಂದು ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷರ ನೇತೃತ್ವದ ನಿಯೋಗ­ದೊಂದಿಗೆ ಪಕ್ಷದ ವರಿಷ್ಠರಲ್ಲಿ ಮನವಿ ಮಾಡಲಾಗುವುದು ಎಂದು ತಿಳಿಸಿದರು.ಚುನಾವಣೆ ಸಂದರ್ಭದಲ್ಲಿ ಪಕ್ಷವು ಹೊರ­ತಂದಿದ್ದ ಪ್ರಣಾಳಿಕೆಯಲ್ಲಿ ಮಹಿಳೆಯರಿಗೆ ಮೀಸ­ಲಾತಿ ಕಲ್ಪಿಸಲಾಗುವುದು ಎಂದು ತಿಳಿಸಲಾಗಿತ್ತು. ಅದರಂತೆ ಕೇಂದ್ರದ ಸಚಿವ ಸಂಪುಟದಲ್ಲಿ ಶೇ 33 ರಷ್ಟು ಆದ್ಯತೆ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ನಿರೀಕ್ಷೆ ಮೀರಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿ­ದ್ದಾರೆ. ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಅಭಿನಂದನೆ ಹಾಗೂ ಅವಲೋಕನ ಸಭೆಗಳನ್ನು ನಡೆಸಲು ರಾಜ್ಯ ಮಹಿಳಾ ಮೋರ್ಚಾ ತಂಡ ನಿರ್ಧರಿಸಿದೆ ಎಂದು ಹೇಳಿದರು.ತಂಡಗಳನ್ನು ರಚಿಸಿ ಪ್ರತಿ ಜಿಲ್ಲೆಯಲ್ಲಿ ಅಭಿನಂದನೆ ಹಾಗೂ ಸೋಲು ಕಂಡ ಕ್ಷೇತ್ರದಲ್ಲಿ ಅವಲೋಕನ ಸಭೆ ನಡೆಸುವ ಮೂಲಕ ಪಕ್ಷವನ್ನು ಇನ್ನಷ್ಟು ಬಲಿಷ್ಠಿಗೊಳಿಸಲಾಗುವುದು ಎಂದು ಹೇಳಿದರು.ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಿರೀಕ್ಷೆ ಮೀರಿ ದೇಶದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಇದೊಂದು ಹೊಸ ದಾಖಲೆ­ಯಾಗಿದೆ. ಈ ಎಲ್ಲ ಸಾಧನೆಗಳ ಹಿಂದೆ ಲಕ್ಷಾಂತರ ಕಾರ್ಯಕರ್ತರ ಶಕ್ತಿ ಅಡಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದರೂ ನಮ್ಮ ಪಕ್ಷ ಹೆಚ್ಚು ಸ್ಥಾನಗಳನ್ನು ಗಳಿಸಿರುವುದು ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳು ಹಾಗೂ ನಾಯಕರಲ್ಲಿ  ಹುಮ್ಮಸ್ಸು ಹೆಚ್ಚಿಸಿದೆ ಎಂದು ತಿಳಿಸಿದರು.ನಂತರ ನಡೆದ ಕಾರ್ಯಕ್ರಮದಲ್ಲಿ ಮಹಿಳಾ ಮೋರ್ಚಾದ ಸರಸ್ವತಿ ಚಿಮ್ಮಲಗಿ, ಶ್ರೀಮತಿ ಭಾರತಿ ಜಂಬಗಿ, ಶ್ರೀಲತಾ ಭಾರಧ್ವಾಜ್, ಜಿಲ್ಲಾಧ್ಯಕ್ಷೆ ಕಲಾವತಿ ರಾಜೂರ, ಭಾಗ್ಯ ಉದ್ನೂರ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ನಂದಾ ಹೊಸಮಠ ಮತ್ತಿತರರು ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.