ಸೋಮವಾರ, ಜೂನ್ 14, 2021
26 °C

‘ರಮ್ಯಾಗೆ ಸಿನಿಮಾ ಗ್ಲಾಮರ್‌ ಒಂದೇ ಬಂಡವಾಳ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀರಂಗಪಟ್ಟಣ: ಕಾಂಗ್ರೆಸ್‌ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಲಿರುವ ಸಂಸದೆ ರಮ್ಯಾ ಅವರಿಗೆ ಚಿತ್ರನಟಿ ಎಂಬ ಗ್ಲಾಮರ್‌ ಮಾತ್ರ ಬಂಡವಾಳವೇ ಹೊರತು ಅವರು ನಿಜವಾದ ಜನಪರ ಅಭ್ಯರ್ಥಿ ಅಲ್ಲ ಎಂದು ಮಂಡ್ಯ ಕ್ಷೇತ್ರದ ಬಿಎಸ್‌ಪಿ ಅಭ್ಯರ್ಥಿ ಎಂ. ಕೃಷ್ಣಮೂರ್ತಿ ಲೇವಡಿ ಮಾಡಿದರು.ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಪಟ್ಟಣದಲ್ಲಿ ಬಿಎಸ್‌ಪಿ ಮುಖಂಡರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.ರಮ್ಯಾ ಅವರು ಯಾವುದೇ ಜನಪರ ಹೋರಾಟಗಳಲ್ಲಿ ಪಾಲ್ಗೊಂಡಿಲ್ಲ. ರೈತರು ಹಾಗೂ ತಳ ಸಮುದಾಯದ ಜನರ ಬವಣೆ ಅವರಿಗೆ ಗೊತ್ತಿಲ್ಲ. ಬಿಜೆಪಿ ಘೋಷಿತ ಅಭ್ಯರ್ಥಿ ಶಿವಲಿಂಗಯ್ಯ ಕೂಡ ಕ್ಷೇತ್ರದ ಜನರಿಗೆ ಅಪರಿಚಿತರು.ಅವರಿಗೆ ಯಾವುದೇ ಹೋರಾಟದ ಹಿನ್ನೆಲೆ ಇಲ್ಲ. ಕಳೆದ ಆರೇಳು ವರ್ಷಗಳಿಂದ ನಾನು ಜನ ಸಾಮಾನ್ಯರ ಜತೆಗಿದ್ದೇನೆ. ಕಾವೇರಿ ಚಳವಳಿ, ಕಬ್ಬು ಬೆಳೆಗಾರರ ಸಮಸ್ಯೆ, ಬಗರ್‌ಹುಕುಂ ಸಾಗುವಳಿ, ಬೀದಿ ಬದಿ ವ್ಯಾಪಾರಿಗಳು ಹಾಗೂ ಗ್ರಾಮ ಸಹಾಯಕರ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದೇನೆ. ಜಾತಿ ಮೀರಿ ಕೆಲಸ ಮಾಡುತ್ತಿದ್ದೇನೆ. ಕ್ಷೇತ್ರದ ಜನ ನನ್ನ ಹೋರಾಟವನ್ನು ಗುರುತಿಸಿದ್ದಾರೆ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.