ಮಡಿಕೇರಿ: ಮಾನವೀಯತೆಯೇ ಧರ್ಮ ಎಂಬುದನ್ನು ಪ್ರತಿಪಾದಿಸಿದ ಮಹಾನ್ ದಾರ್ಶನಿಕ ಮಹರ್ಷಿ ವಾಲ್ಮೀಕಿ ಅವರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವುದು ಅಗತ್ಯ ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿ ಶುಕ್ರವಾರ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಾಲ್ಮೀಕಿ ಅವರು ಮಾನವ ಕುಲಕ್ಕೆ ತನ್ನದೇ ಆದ ಕೊಡುಗೆ ನೀಡಿದ ಮಹಾನ್ ಚೇತನ. ಇಡೀ ವಿಶ್ವಕ್ಕೆ ರಾಮಾಯಣದಂತಹ ಮಹಾನ್ ಗ್ರಂಥವನ್ನು ನೀಡಿದ ಕೊಡುಗೆ ವಾಲ್ಮೀಕಿಗೆ ಸಲ್ಲುತ್ತದೆ ಎಂದರು.

ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ.ಸೋಮಣ್ಣ ಮಾತನಾಡಿ, ಅಜ್ಞಾನ ತಾಂಡವಾಡುತ್ತಿದ್ದ ರತ್ನಾಕರ ನಿನಾದ ಕುಲದಲ್ಲಿ ಹುಟ್ಟಿ ಆದಿ ಕವಿಯಾಗಿ ಭಾನು, ಭೂಮಿ, ಪರ್ವತಗಳು, ಗ್ರಹತಾರೆ ನಕ್ಷತ್ರಗಳು, ಸಾಗರ ಸಮುದ್ರದವರೆಗೂ ರಾಮಾಯಣವು ಜನರ ಮನದಲ್ಲಿ ಮನೆ ಮಾಡುವಂತಹ ಸುಂದರವಾದ ಮಹಾಕಾವ್ಯ ಕಟ್ಟಿಕೊಟ್ಟ ಕೀರ್ತಿ ಮಹರ್ಷಿ ವಾಲ್ಮೀಕಿಯವರದ್ದು ಎಂದರು.

ವಾಲ್ಮೀಕಿ ರಾಮಾಯಣ ಪ್ರೇರಣೆಯಿಂದಾಗಿ ದೇಶದ ಅನೇಕ ಭಾಷೆಗಳಲ್ಲಿ ರಾಮಾಯಣ ಮಹಾಕಾವ್ಯ ರಚನೆಯಾಯಿತು. ದೇಶ-ವಿದೇಶ ಭಾಷೆಗಳಲ್ಲಿಯೂ ರಚಿಸಲ್ಪಟ್ಟ ಮಹಾ ಗ್ರಂಥವಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ. ಶಿವಪ್ಪ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಎನ್. ರಾಜಾರಾವ್ ಮಾತನಾಡಿದರು. ಉಪಾಧ್ಯಕ್ಷರಾದ ಬಿದ್ದಂಡ ಉಷಾದೇವಮ್ಮ, ಜಿಲ್ಲಾಧಿಕಾರಿ ಅನುರಾಗ್ ತಿವಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್.ಅನುಚೇತ್, ಸಿಇಓ ಕೆ.ಬಿ.ಅಂಜನಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್. ಪ್ರಸನ್ನ, ಉಪ ವಿಭಾಗಾಧಿಕಾರಿ ಅಭಿರಾಮ್ ಜಿ. ಶಂಕರ್, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾಧಿಕಾರಿ ಕೆ.ಎಚ್. ಸತೀಶ್, ಜಿಲ್ಲಾ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ
ಅಧಿಕಾರಿ ಕೆ.ವಿ. ಸುರೇಶ್ ಇದ್ದರು.

ಸಭಾ ಕಾರ್ಯಕ್ರಮಕ್ಕೂ ಮೊದಲು ನಗರದ ಗದ್ದಿಗೆ ಸಮೀಪದ ಬನ್ನಿಮಂಟಪ ಬಳಿ ಮೆರವಣಿಗೆ ತೆರಳಲಾಯಿತು. ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಪೊಲೀಸ್ ವಾದ್ಯ ತಂಡಗಳು ಭಾಗವಹಿಸಿದ್ದವು.

ಪ್ರೋತ್ಸಾಹಧನ ವಿತರಣೆ
2012-13ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಾದ ದಿವ್ಯ ಎನ್.ಟಿ., ಪೂಜಾ ಎಚ್.ಕೆ., ಮಾಲ ವೈ.ಆರ್., ಹರ್ಷಿತಾ ಎಂ.ಆರ್, ಕಿರಣ್ಕುಮಾರ್ ಅವರಿಗೆ ಕಾರ್ಯಕ್ರಮದಲ್ಲಿ ತಲಾ ರೂ.10 ಸಾವಿರ ಪ್ರೋತ್ಸಾಹಧನದ ಚೆಕ್ ವಿತರಿಸಲಾಯಿತು.

‘ರಾಮಾಯಣದ ತತ್ವಗಳಿಂದ ಸಮಾಜ ಸುಧಾರಣೆ’
ಸೋಮವಾರಪೇಟೆ: ಕಲುಷಿತ ಸಮಾಜದ ಸುಧಾರಣೆಗೆ ರಾಮಾಯಣ ಗ್ರಂಥದಲ್ಲಿರುವ ತತ್ವಗಳು ಪ್ರಮುಖ ಪಾತ್ರವಹಿಸುತ್ತವೆ ಎಂದು ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷ ಎಂ. ಮಲ್ಲಪ್ಪ ಅಭಿಪ್ರಾಯ ಪಟ್ಟರು.

ತಾಲ್ಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲ್ಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ ಹಾಗೂ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದ ಆಧ್ಯಾತ್ಮಿಕ ಜಗತ್ತಿನ ಸರ್ವೋಚ್ಛ ಗ್ರಂಥಗಳಾದ ರಾಮಾಯಣ ಮತ್ತು ಮಹಾಭಾರತ ಗ್ರಂಥಗಳ ಅಧ್ಯಯನದಿಂದ ಜೀವನದಲ್ಲಿ ಉತ್ತಮ ಬದಲಾವಣೆಯಾಗುವುದರ ಜತೆಗೆ ಸಾಮಾಜಿಕವಾಗಿಯೂ ಉತ್ತಮ ವಾತಾವರಣ ನಿರ್ಮಾಣವಾಗುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಜಿ.ಬಿ. ಸೋಮಯ್ಯ, ಯುವಜನಾಂಗ ಅಡ್ಡದಾರಿ ಹಿಡಿಯುತ್ತಿದೆ. ಪೋಷಕರು ಮಹಾನ್ ಗ್ರಂಥಗಳನ್ನು ಓದಿ ತಮ್ಮ ಮಕ್ಕಳಿಗೂ ಅದರ ವಿಚಾರಗಳನ್ನು ತಿಳಿಸಬೇಕು. ಮಹಾನ್ಪುರುಷರ ಗ್ರಂಥಗಳು ಯುವಜನಾಂಗಕ್ಕೆ ಸ್ಪೂರ್ತಿಯಾಗಬಲ್ಲವು. ವ್ಯಾಸ ಮತ್ತು ವಾಲ್ಮೀಕಿಯ ರಾಮಾಯಣ ಸರ್ವಕಾಲಕ್ಕೂ ಶ್ರೇಷ್ಠವಾದ ಗ್ರಂಥಗಳಾಗಿವೆ. ಇಂದಿನ ಶಿಕ್ಷಣ ವ್ಯವಸ್ಥೆ ಇನ್ನಷ್ಟು ಮೌಲ್ಯಾಧಾರಿತವಾಗಿ ಸಮಾಜ ಸರಿಯಾದ ದಿಕ್ಕಿನಲ್ಲಿ ಸಾಗಬೇಕಾದರೆ ರಾಮಾಯಣ ಮತ್ತು ಮಹಾಭಾರತದ ಕೆಲ ಅಂಶಗಳನ್ನು ಪಠ್ಯದಲ್ಲಿ ಅಳವಡಿಸಬೇಕು. ಧರ್ಮದ ಆಧಾರದ ಮೇಲೆ ಸಮಾಜ ನಿರ್ಮಾಣವಾಗಬೇಕು ಎಂದು ಹೇಳಿದರು.

ಯುವ ಜನತೆ ವಾಲ್ಮೀಕಿ ಸೇರಿದಂತೆ ಮಹಾನ್ ದಾರ್ಶನಿಕರ ತತ್ವಾದರ್ಶ, ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಲೀಲಾ ನಿರ್ವಾಣಿ ಕಾರ್ಯಕ್ರಮ ಉದ್ಘಾಟಿಸಿದರು. ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೊರಗಪ್ಪ, ತಹಶೀಲ್ದಾರ್ ಹಾಗೂ ರಾಷ್ಟ್ರೀಯ ಹಬ್ಬಗಳ ಸಮಿತಿ ಅಧ್ಯಕ್ಷ ಜಿ.ಬಿ. ಚಂದ್ರಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಹಾಜರಿದ್ದರು. ಕಾರ್ಯಕ್ರಮದಲ್ಲಿ ಲಿಮ್ಕಾ ದಾಖಲೆ ಖ್ಯಾತಿಯ ತಬಲ ವಾದಕ ವಿಜಯಕುಮಾರ್ ಅವರನ್ನು ಸನ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.