ಭಾನುವಾರ, ಜೂನ್ 20, 2021
25 °C

‘ವಿದ್ಯಾರ್ಥಿಗಳಿಗೆ ಮತದಾನದ ಅರಿವು ಮೂಡಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ  ಸ್ವೀಪ್ ಸಮಿತಿ ತಾಲ್ಲೂಕುಮಟ್ಟದ ಅಧಿಕಾರಿಗಳ ಸಭೆ ಆಯೋಜಿಸಿ, ಕಾಲೇಜುಗಳು ಮತ್ತು ಸಾರ್ವಜನಿಕವಾಗಿ ಹೇಗೆ ಮತದಾರರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳ­ಬಹುದು ಎಂಬ ಬಗ್ಗೆ ಮಾಹಿತಿ ನೀಡಲಾಯಿತು.ಸಭೆಯಲ್ಲಿ ಸಲಹೆ ಸೂಚನೆಗಳನ್ನು ನೀಡಿದ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಪುಟ್ಟಸ್ವಾಮಿ, ‘ಭಾರತದಲ್ಲಿ ಚುನಾವಣಾ ಪ್ರಕ್ರಿಯೆ ಒಂದು ಮಹತ್ವದ ವಿಚಾರ. ಇದರಲ್ಲಿ ಎಲ್ಲರ ಪಾಲ್ಗೊಳ್ಳುವಿಕೆ ಅಗತ್ಯ.  ಅದಕ್ಕಾಗಿ, ಮತದಾರರ ಶಿಕ್ಷಣ ಮತ್ತು ಜಾಗೃತಿ ಸಮಿತಿ ಅನೇಕ ಚಟುವಟಿಕೆ ಹಮ್ಮಿಕೊಂಡಿದ್ದು, ಎನ್ಎಸ್ಎಸ್ ಅಧಿಕಾರಿಗಳು ಇದರಲ್ಲಿ ತೊಡಗಿಸಿಕೊಂಡು ಸಹಕರಿಸ­ಬೇಕು’ ಎಂದರು.‘ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಬೇಕು. ಇದಕ್ಕೆ ಪೂರಕವಾಗುವಂತೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಂಡು ಯುವ ಮತದಾರರು ಸ್ವಯಂಪ್ರೇರಣೆಯಿಂದ ಮತದಾನದಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು’ ಎಂದರು.ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಸವರಾಜು, ‘ವಿದ್ಯಾರ್ಥಿಗಳಲ್ಲಿ ಮತದಾನದ ಬಗ್ಗೆ ಅರಿವು ನೀಡುವುದರಿಂದ ಅವರ ಕುಟುಂಬಕ್ಕೂ ಮಾಹಿತಿ ರವಾನೆಯಾ­ಗುತ್ತದೆ.  ಆ ಮೂಲಕ ಸಮಾಜದ ಇತರ ಜನರಿಗೂ ಮತದಾನದ ಪ್ರಾಮುಖ್ಯತೆ ತಿಳಿಯುತ್ತದೆ’ ಎಂದರು.ಸ್ವೀಪ್ ಸಮಿತಿ ನೋಡಲ್ ಅಧಿಕಾರಿ  ವಿನೋದ್ ಚಂದ್ರ ಇಲ್ಲಿವರೆಗೆ ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಂಡಿರುವ ಚಟುವಟಿಕೆಗಳ ಬಗ್ಗೆ ವಿವರಿಸಿದರು. ‘ವಿದ್ಯಾರ್ಥಿಗಳನ್ನು ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡರೆ ಸಾಮಾಜಿಕ ಬದಲಾವಣೆಗೂ ಅವಕಾಶವಾಗುತ್ತದೆ. ಭಾರತೀಯ ಪ್ರಜಾಪ್ರಭುತ್ವದ ವ್ಯವಸ್ಥೆ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆಯೂ ಮನವರಿಕೆಯಾಗುತ್ತದೆ’ ಎಂದರು. ಸರ್ಕಾರಿ ವಿಜ್ಞಾನ ಕಾಲೇಜಿನ ಎನ್ಎಸ್ಎಸ್ ಅಧಿಕಾರಿ ಕೃಷ್ಣಪ್ಪ ವೇದಿಕೆಯಲ್ಲಿದ್ದರು. ವಿವಿಧ ಕಾಲೇಜುಗಳ ಎನ್ಎಸ್ಎಸ್ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಹ ಕಾರ್ಯದರ್ಶಿ ಮಂಜುನಾಥ, ಕ್ಷೇತ್ರ ಪ್ರಚಾರ ಇಲಾಖೆಯ ಪ್ರಕಾಶ್ ಇತರರು ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.