‘ವಿವೇಕಾನಂದರ ಆದರ್ಶ ಪಾಲಿಸಿ’

ಬೆಂಗಳೂರು: ‘ಯುವ ಜನರು ವಿವೇಕಾನಂದರ ಆದರ್ಶಗಳನ್ನು ಪಾಲಿಸುವ ಮೂಲಕ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಎಂ. ನಾರಾಯಣಸ್ವಾಮಿ ಹೇಳಿದರು.
ಸ್ವಾಮಿ ವಿವೇಕಾನಂದ ಫೌಂಡೇಷನ್ ಮಹದೇವಪುರ ಕ್ಷೇತ್ರದ ಹಂಚರಹಳ್ಳಿಯಲ್ಲಿ ಆಯೋಜಿಸಿದ್ದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನದ ಚೆಕ್ಗಳನ್ನು ವಿತರಿಸಿ ಅವರು ಮಾತನಾಡಿದರು.
‘ದೇಶ ಸದೃಢವಾಗಿ ಬೆಳೆಯಬೇಕಾದರೆ ಯುವಕರ ಪಾತ್ರ ಮುಖ್ಯವಾಗಿದೆ. ಯುವಪೀಳಿಗೆ ಸನ್ಮಾರ್ಗದಲ್ಲಿ ನಡೆಯಬೇಕು. ಯಾವುದೇ ದುಶ್ಚಟಗಳಿಗೆ ಬಲಿಯಾಗಬಾರದು’ ಎಂದು ಕಿವಿಮಾತು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗ ಘಟಕದ ಅಧ್ಯಕ್ಷ ಕೆಂಪರಾಜು ಮಾತನಾಡಿ, ‘ಸ್ಥಳೀಯ ಯುವಕರು ಸ್ವಾಮಿ ವಿವೇಕಾನಂದ ಫೌಂಡೇಷನ್ ಸ್ಥಾಪಿಸಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿದ್ದಾರೆ’ ಎಂದರು. ಇದೇ ವೇಳೆ ಬಡ ಮಹಿಳೆಯರಿಗೆ ಸೀರೆ, ವೃದ್ಧರಿಗೆ ಕಂಬಳಿ, ಹಾಸಿಗೆ ವಿತರಿಸಲಾಯಿತು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.