ಉಡುಪಿ: ‘ಸಾಂಸ್ಕೃತಿಕ ಕಾರ್ಯಕ್ರಮ ಗಳು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ರೂಪಿಸುತ್ತವೆ. ಹಾಗಾಗಿ ಶಾಲೆಯಲ್ಲಿ ಪ್ರತಿ ವರ್ಷ ವಾರ್ಷಿಕೋತ್ಸವ ಕಾರ್ಯಕ್ರಮ ವನ್ನು ನಡೆಸಿಕೊಂಡು ಬರಬೇಕು’ ಎಂದು ಕಟಪಾಡಿ ಎಸ್ವಿಎಸ್ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ಮುಖ್ಯ ಶಿಕ್ಷಕ ಶೇಖರ್ ಅಂಚನ್ ಹೇಳಿದರು.

ಉದ್ಯಾವರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ವಾರ್ಷಿಕೋತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮಾತ ನಾಡಿದರು.
ಉದ್ಯಾವರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಗಂಧಿ ಶೇಖರ್ ಧ್ವಜಾ ರೋಹಣ ನೆರವೇರಿಸಿದರು. ಶಾಲಾಭಿ ವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷ ಉದ್ಯಾವರ ನಾಗೇಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ರೋಟರಿ ಅಧ್ಯಕ್ಷ ಕೆ.ಟಿ. ನಾಯಕ್, ಜೇಸಿ ಅಧ್ಯಕ್ಷ ಜಗದೀಶ್ ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ದಿವಾಕರ್ ಬೊಳ್ಜೆ, ಜಿತೇಂದ್ರ ಶೆಟ್ಟಿ, ಪ್ರಾಂಶುಪಾಲ ಮಹೇಂದ್ರ ಎನ್ ಶರ್ಮಾ, ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ರಮೇಶ್ ಆಚಾರ್ಯ ಉಪಸ್ಥಿತರಿದ್ದರು. ಪ್ರೌಢ ಶಾಲಾ ಮುಖ್ಯಸ್ಥೆ ದಯಾವತಿ ಸ್ವಾಗತಿಸಿದರು, ಶಿಕ್ಷಕಿ ಪ್ರಭಾ ಬಿ. ಕಾರ್ಯ ನಿರೂಪಿಸಿದರು, ಶಿಕ್ಷಕಿ ಜಯತಂತ್ರಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.