ಧಾರವಾಡ: ‘ನಿಸರ್ಗಕ್ಕೆ ತಕ್ಕ ಹಾಗೆ ನಮ್ಮ ಶಾಲೆಗಳಲ್ಲಿ ಗಿಡಮರಗಳನ್ನು ನೆಟ್ಟು ಹೊಸತನವನ್ನು ನಿರ್ಮಿಸಬೇಕು. ಸುಂದರ ಪರಿಸರವು ಇಂದಿನ ಅವಶ್ಯಕತೆಗಳಲ್ಲಿ ಒಂದಾಗಿದೆ’ ಎಂದು ಹಿರಿಯ ಕವಿ ಡಾ.ಚೆನ್ನವೀರ ಕಣವಿ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಹುಬ್ಬಳ್ಳಿ-–ಧಾರವಾಡ ನಾಗರಿಕ ಪರಿಸರ ಸಮಿತಿಯ ಆಶ್ರಯದಲ್ಲಿ ಬುಧವಾರ ನಗರದಲ್ಲಿ ನಡೆದ ‘ಪರಿಸರ ಮಿತ್ರ’ ಶಾಲಾ ಪ್ರಶಸ್ತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಉತ್ತಮ ಪರಿಸರವನ್ನು ಕಾಪಾಡಿಕೊಂಡು ಬಂದಲ್ಲಿ ಮನುಷ್ಯರ ಬದುಕು, ಭವಿಷ್ಯ ಉಜ್ವಲಗೊಳ್ಳುತ್ತದೆ. ಇದಕ್ಕೆ ಮನುಷ್ಯರೆ ಮನಸ್ಸು ಮಾಡಬೇಕು. ಇಂಚರದ ಧ್ವನಿಯಿಲ್ಲದೆ ಜಗತ್ತು ಜಗತ್ತೇ ಅಲ್ಲ. ಪರಿಸರ ಪ್ರೇಮದಿಂದ ಬಾಂಧವ್ಯ ಬೆಳೆಯುತ್ತದೆ ಹಾಗೂ ನಮ್ಮ ಜೀವನದಲ್ಲಿ ಶಕ್ತಿ ತರುತ್ತದೆ’ ಎಂದ ಅವರು ಪರಿಸರ ಕುರಿತಾದ ಕವಿತೆಗಳನ್ನು ವಾಚಿಸಿದರು.

ಪರಿಸರ ಮಿತ್ರ ಶಾಲಾ ಪ್ರಶಸ್ತಿ ಯೋಜನೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಪಡೆದ ಬಾಲಬಳಗ ಶಾಲೆಗೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಡಿ.ಪಿ.ಬಿರಾದಾರ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿ, ‘ಪ್ರಜ್ಞಾವಂತಿಕೆಯ ಕೊರತೆಯಿಂದ ಸಾರ್ವಜನಿಕರಲ್ಲಿ ಪರಿಸರ ಪ್ರಜ್ಞೆ ಕಡಿಮೆಯಾಗಿದೆ. ಇದರಿಂದ ಪರಿಸರ ನಾಶ ಹೆಚ್ಚಾಗಿ ನಮ್ಮ ಪ್ರಗತಿ ಕುಂಠಿತಗೊಳ್ಳುತ್ತದೆ. ಈ ಕುರಿತಂತೆ ಮಕ್ಕಳಲ್ಲಿ ಪ್ರಜ್ಞಾಪೂರ್ವಕವಾಗಿ ಇಲಾಖೆಯವರು ಜಾಗೃತಿ ಮೂಡಿಸಿ ಶಾಲೆಗಳನ್ನು ಪ್ರೋತ್ಸಾಹಿಸಿ ಹೆಚ್ಚಿನ ಕಾಳಜಿ ವಹಿಸುವುದು ಶ್ಲಾಘನೀಯ’ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ.ಬಿ.ಕೆ.ಎಸ್.ವರ್ಧನ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಆರಂಭದಲ್ಲಿ ಕೆ.ಇ. ಬೋರ್ಡ್ ಶಾಲಾಮಕ್ಕಳಿಂದ ಪರಿಸರ ಗೀತೆ ಜರುಗಿತು. ಶಂಕರ ಕುಂಬಿ ಸ್ವಾಗತಿಸಿದರು. ಬಾಲಬಳಗ ಸೃಜನಶೀಲ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಡಾ.ಸಂಜೀವ ಕುಲಕರ್ಣಿ ಹಾಗೂ ನಿವೃತ್ತ ಶಿಕ್ಷಕ ಕೆ.ಎಚ್.ನಾಯಕ್ ಪರಿಸರ ಮಿತ್ರ ಶಾಲಾ ಕಾರ್ಯಕ್ರಮ ಕುರಿತು ತಮ್ಮ ಅನುಭವಗಳನ್ನು ಹಂಚಿಕೊಂಡರು. ಜಗದೀಶ ಮಳಗಿ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕ ಕೆ.ಜಗುಚಂದ್ರ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.