‘ಶಿಕ್ಷಕರಿಗೆ ಒತ್ತಡ ಕಡಿಮೆ ಮಾಡಿ’

7

‘ಶಿಕ್ಷಕರಿಗೆ ಒತ್ತಡ ಕಡಿಮೆ ಮಾಡಿ’

Published:
Updated:
‘ಶಿಕ್ಷಕರಿಗೆ ಒತ್ತಡ ಕಡಿಮೆ ಮಾಡಿ’

ಯಲಹಂಕ: ‘ನಮ್ಮ ಸಮಾಜ ಸರಿದಾರಿಗೆ ಸಾಗುವುದರ ಮೂಲಕ ಬಡತನ ನಿರ್ಮೂಲನೆಯಾಗುವಂತೆ ಮಾಡುವ ಶಕ್ತಿ ಇರುವುದು ಶಿಕ್ಷಕರಿಗೆ ಮಾತ್ರ’ ಎಂದು ಕೃಷಿ ಸಚಿವ ಕೃಷ್ಣಬೈರೇಗೌಡ ಹೇಳಿದರು.ಬೆಂಗಳೂರು ಉತ್ತರ ವಲಯ–4 ಮತ್ತು  ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ಸಂಘಗಳ  ಆಶ್ರಯದಲ್ಲಿ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಯನ್ನು ಉದ್ಘಾಟಿಸಿ ಮಾತನಾಡಿದರು.ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ ಮಾತನಾಡಿದರು. ಜಿ.ಪಂ ಸದಸ್ಯರಾದ ವಾಣಿಶ್ರೀ ವಿಶ್ವನಾಥ್‌, ಮಾರೇಗೌಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಎಂ. ನಾರಾಯಣ ಸ್ವಾಮಿ ಹಾಗೂ ಪ್ರೌಢ ಶಾಲಾ ಸಹಶಿಕ್ಷಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಕೆ. ಮಂಜುನಾಥ್‌, ಕ್ಷೇತ್ರ ಶಿಕ್ಷಣಾಧಿಕಾರಿ ನರಸಿಂಹಮೂರ್ತಿ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry