ಸೋಮವಾರ, ಜೂನ್ 21, 2021
21 °C

‘ಶಿಕ್ಷಕರ ಶಿಕ್ಷಣ ವಿಶ್ವವಿದ್ಯಾಲಯ ಸ್ಥಾಪನೆ ಅಗತ್ಯ’

'ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಶಿಕ್ಷಣ ಜೀವನಕ್ಕೆ ಭದ್ರ ಬುನಾದಿ ಒದಗಿಸುತ್ತದೆ. ಇದರಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಶಿಕ್ಷಕರಲ್ಲಿ ಶೈಕ್ಷಣಿಕ ಸಾಮರ್ಥ್ಯವನ್ನು ಹೆಚ್ಚಿಸಿ, ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆಯನ್ನು ತರಲು ಶಿಕ್ಷಕರ ಶಿಕ್ಷಣ ವಿಶ್ವವಿದ್ಯಾಲಯ ಸ್ಥಾಪನೆ ಅಗತ್ಯವಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಶಿಕ್ಷಣ ವಿಭಾಗದ ಅಧ್ಯಕ್ಷ ಡಾ.ಎಂ.ಎಸ್‌್. ತಳವಾರ್‌ ಅಭಿಪ್ರಾಯಪಟ್ಟರು.ನಗರದ ಶಂಕರಗೌಡ ಶಿಕ್ಷಣ ಮಹಾವಿದ್ಯಾಲಯದಲ್ಲಿ ರಾಜ್ಯ ಅನುದಾನಿತ ಶಿಕ್ಷಣ ಅಧ್ಯಾಪಕರುಗಳ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಶಿಕ್ಷಕರ ಶಿಕ್ಷಣ ವಿಶ್ವವಿದ್ಯಾಲಯ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜು ಶಿಕ್ಷಣದ ಗುಣಮಟ್ಟ ಹೆಚ್ಚಿಸುವುದು ಅವಶ್ಯ. ಪಠ್ಯಕ್ರಮ, ಶಿಕ್ಷಕರಿಗೆ ತರಬೇತಿ, ಆಡಳಿತಾತ್ಮಕ ಪ್ರಜ್ಞೆ ಸೇರಿದಂತೆ ವಿವಿಧ ವಿಷಯಗಳನ್ನೊಳಗೊಂಡ ವಿಶ್ವವಿದ್ಯಾಲಯ ಸ್ಥಾಪನೆಗೆ ಅಗತ್ಯವಾದ ಕಾರ್ಯನೀತಿ ರಚನೆ ಬಗ್ಗೆ ಗಂಭೀರ ಚಿಂತನೆ ನಡೆಯಬೇಕಿದೆ ಎಂದರು.ವಿಶ್ವವಿದ್ಯಾಲಯಗಳನ್ನು ಸಂಕುಚಿತಗೊಳಿಸದೆ, ವ್ಯಾಪಕ ದೃಷ್ಟಿಕೋನದಲ್ಲಿ ಕೆಲಸ ಮಾಡಲು ಅನುವು ಮಾಡಿಕೊಡಬೇಕು. ಅತ್ಯುತ್ತಮ ಶಿಕ್ಷಕರನ್ನು ಹೊಂದಿದಾಗ ಮಾತ್ರ ಉತ್ತಮ ಶಿಕ್ಷಣ ನೀಡಲು ಸಾಧ್ಯ ಎಂದು ಹೇಳಿದರು.ಮೈಸೂರು ಮಾನಸಗಂಗೋತ್ರಿ ವಿಶ್ವವಿದ್ಯಾಲಯದ ಶಿಕ್ಷಣಶಾಸ್ತ್ರ ವಿಭಾಗದ ಡಾ.ಯಶೋಧರ ಮಾತನಾಡಿ, ದೇಶದ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದಾಗಿದೆ. ದೇಶದಲ್ಲಿನ ಮಾನವ ಸಂಪನ್ಮೂಲದ ಗುಣಮಟ್ಟವನ್ನು ಶಿಕ್ಷಣ ನಿರ್ಧರಿಸುತ್ತದೆ. ಅಂತಹವರನ್ನು ತಯಾರಿಸುವ ಶಿಕ್ಷಕರನ್ನು ಸಜ್ಜುಗೊಳಿಸುವ ಶಿಕ್ಷಕರ ಶಿಕ್ಷಣ ವಿಶ್ವವಿದ್ಯಾಲಯ ಅಗತ್ಯವಾಗಿದೆ ಎಂದರು.ಅಧ್ಯಾಪಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಾ.ಎ. ಸೋಮಶೇಖರ್‌ ಮಾತನಾಡಿ, ಏಕರೂಪ ಶಿಕ್ಷಣ ನೀತಿಯ ಅಗತ್ಯವಿದೆ. ವಿಶ್ವವಿದ್ಯಾಲಯ ಸ್ಥಾಪನೆ ನಿಟ್ಟಿನಲ್ಲಿ ಹೋರಾಟ ಮಾಡಬೇಕಾಗಿದೆ ಎಂದರು.ಪಿಇಟಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎಚ್‌್. ಹೊನ್ನಪ್ಪ ಅಧ್ಯಕ್ಷತೆ ವಹಿಸಿದ್ದರು. ಶಂಕರಗೌಡ ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲ ಪ್ರೊ.ಕೆ.ಎಸ್‌್. ಚಂದ್ರು, ಸುವರ್ಣ ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.