ಚಿಕ್ಕಬಳ್ಳಾಪುರ: ಮಕ್ಕಳು ಶೈಕ್ಷಣಿಕ ಪರೀಕ್ಷೆಗಳಲ್ಲಿ ಅಷ್ಟೇ ಅಲ್ಲ, ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಹ ಶಿಕ್ಷಕರು ಪ್ರಮುಖ ಪಾತ್ರವಹಿಸುತ್ತಾರೆ. ವಿದ್ಯಾರ್ಥಿಯ ಜೀವನ ಯಶಸ್ವಿಯಾಗುವಲ್ಲಿ ಶಿಕ್ಷಕರ ಕೊಡುಗೆ ಮಹತ್ತರವಾಗಿದ್ದು, ಅವರನ್ನು ಸದಾ ಕಾಲ ಸ್ಮರಿಸಬೇಕು ಎಂದು ಶಾಸಕ ಡಾ. ಕೆ.ಸುಧಾಕರ್ ತಿಳಿಸಿದರು.

ತಾಲ್ಲೂಕಿನ ಮುದ್ದೇನಹಳ್ಳಿ ಸತ್ಯಸಾಯಿ ಲೋಕಸೇವಾ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ಗಳಿಸಿದ ಪ್ರೌಢಶಾಲೆಗಳಿಗೆ ಪ್ರಶಸ್ತಿ ಮತ್ತು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಿ ಮಾತನಾಡಿದರು.

ಶಿಕ್ಷಣ ಕ್ಷೇತ್ರಕ್ಕೆಂದೇ ರಾಜ್ಯ ಸರ್ಕಾರವು ಸುಮಾರು ₨ 18 ಸಾವಿರ ಕೋಟಿ ರೂಪಾಯಿಗಳಷ್ಟು ಅನುದಾನ ನೀಡಿದ್ದು, ಅದರಲ್ಲಿ 14 ಸಾವಿರ ಕೋಟಿ ರೂಪಾಯಿ ಶಿಕ್ಷಕರ ವೇತನಕ್ಕೆ ವಿನಿಯೋಗವಾಗುತ್ತಿದೆ ಎಂದು ಅವರು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಸ್.ಎನ್.ಚಿನ್ನಪ್ಪ, ಮುಖ್ಯಕಾರ್ಯನಿರ್ವಹಣಾಧಿಕಾರಿ ನೀಲಾ ಮಂಜುನಾಥ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಜಿತ್ಪ್ರಸಾದ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.