‘ಶೈಕ್ಷಣಿಕ ಸೌಲಭ್ಯ ವಿತರಣೆಗೆ ಪ್ರತ್ಯೇಕ ಸಚಿವಾಲಯ ಅಗತ್ಯ’

7

‘ಶೈಕ್ಷಣಿಕ ಸೌಲಭ್ಯ ವಿತರಣೆಗೆ ಪ್ರತ್ಯೇಕ ಸಚಿವಾಲಯ ಅಗತ್ಯ’

Published:
Updated:

ಮಳವಳ್ಳಿ: ಪ್ರಾಥಮಿಕ ಶಾಲೆಗಳಿಗೆ ಸರ್ಕಾರ ನೀಡುವ ಸವಲತ್ತುಗಳನ್ನು ಸಮರ್ಪಕವಾಗಿ ವಿದ್ಯಾರ್ಥಿಗಳಿಗೆ ವಿತರಿಸಲು ಶಿಕ್ಷಕರಲ್ಲದ ಬೇರೆ ಸಿಬ್ಬಂದಿ ಮತ್ತು ಸರ್ಕಾರದಲ್ಲೂ ಪ್ರತ್ಯೇಕ ಸಚಿವ ಖಾತೆ ಆರಂಭಿಸುವ ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ಗೋ. ಮಧುಸೂದನ್ ಅಭಿಪ್ರಾಯಪಟ್ಟರು.ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮುಂದೆ ಇರುವ ಆವರಣದಲ್ಲಿ ಗುರುವಾರ ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಡಾ.ರಾಧಾಕೃಷ್ಣನ್ ಸ್ಮರಣಾರ್ಥ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಾಥಮಿಕ ಶಿಕ್ಷಣದಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಮಾಡುವುದಕ್ಕಿಂತಲೂ ಮಧ್ಯಾಹ್ನದ ಬಿಸಿಯೂಟ, ಹಾಲು ವಿತರಣೆ, ಮಾತ್ರೆ ವಿತರಣೆ ಹೀಗೆ ಸವಲತ್ತು ನೀಡುವಲ್ಲಿ ಹೆಚ್ಚಿನ ಜವಾಬ್ದಾರಿ ಇರುವುದರಿಂದ ಶಿಕ್ಷಕರಿಗೆ ಒತ್ತಡ ಹೆಚ್ಚಾಗುತ್ತಿದೆ.

ಶಾಸಕ ನರೇಂದ್ರಸ್ವಾಮಿ ಅವರು ಆಡಳಿತ ಪಕ್ಷದ ಶಾಸಕರಾಗಿದ್ದು ಈ ಬಗ್ಗೆ ಗಮನ ನೀಡಿ ಪ್ರತ್ಯೇಕ ಸಿಬ್ಬಂದಿ ನೇಮಿಸಲು ಚರ್ಚಿಸುವ ಅಗತ್ಯವಿದೆ ಎಂದು ತಿಳಿಸಿದರು. ಇಂತಹ ಪ್ರಯೋಗವನ್ನು ತಮಿಳುನಾಡು ಸರ್ಕಾರ ಮಾಡಲು ಮುಂದಾಗಿದೆ ಎಂದೂ ಮಾಹಿತಿ ನೀಡಿದರು.ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಕ್ಷಕರಲ್ಲೂ ಕೆಲವು ಲೋಪಗಳು ಇವೆ. ಆದರೆ ಅದನ್ನು ದೊಡ್ಡದು ಮಾಡಿ ವೃತ್ತಿಗೆ ಅಗೌರವ ತರಬಾರದು ಎಂದು ಕಿವಿ ಮಾತು ಹೇಳಿದರು. ಕಳೆದ ಸಾಲಿನಲ್ಲಿ ನಿವೃತ್ತಿ ಹೊಂದಿದ 41 ಶಿಕ್ಷಕರು, ಮೂವರು ಅಕಾಲಿಕ ಮರಣವನ್ನಪ್ಪಿದ್ದ ಶಿಕ್ಷಕರ ಸಂಬಂಧಿಕರು, ಕಳೆದ ಸಾಲಿನಲ್ಲಿ ಹತ್ತನೆ ತರಗತಿಯಲ್ಲಿ ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳ ಮುಖ್ಯಶಿಕ್ಷಕರು, ಹತ್ತನೆ ತರಗತಿಯಲ್ಲಿ ಹೆಚ್ಚು ಅಂಕಗಳಿಸಿದ ಶಿಕ್ಷಕರ ಮಕ್ಕಳನ್ನು ಸನ್ಮಾನಿಸಲಾಯಿತು. ಜಗನ್ನಾಥ್, ನಿತೀನ್ ಸಾಗರ್ ಟ್ರಸ್ಟ್‌ ವತಿಯಿಂದ ಐದು ಮಂದಿ ಶಿಕ್ಷಕರನ್ನು ಸನ್ಮಾನಿಸಲಾಯಿತು. ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ಶಿಕ್ಷಕರಿಗೆ ಬಹುಮಾನ ವಿತರಿಸಲಾಯಿತು.ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಎಸ್. ಪ್ರಕಾಶ್, ಎಚ್. ಬಸಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಂದ್ರ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry