ಬೀದರ್: ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಸಂಘಟಿತ ಹೋರಾಟ ನಡೆಸಬೇಕು ಎಂದು ಎಸ್.ಯು.ಸಿ.ಐ. ರಾಜ್ಯ ಸಮಿತಿ ಸದಸ್ಯ ಎಚ್.ವಿ. ದಿವಾಕರ್ ಹೇಳಿದರು.

ನಗರದಲ್ಲಿ ಬುಧವಾರ ನಡೆದ ಆಶಾ ಕಾರ್ಯಕರ್ತೆಯರ ಜಿಲ್ಲಾಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಮಿಕರ, ಉದ್ಯೋಗಿಗಳ ಸಂವಿಧಾನ ಬದ್ಧ ಹಕ್ಕುಗಳನ್ನು ಕಸಿಯಲು ಗುತ್ತಿಗೆ ಪದ್ಧತಿಯನ್ನು ಜಾರಿಗೆ ತರಲಾಗಿದೆ ಎಂದು ಆರೋಪಿಸಿದರು.

ಆರೋಗ್ಯ ಮತ್ತು ಶಿಕ್ಷಣ ಮಹತ್ವದ ಕ್ಷೇತ್ರಗಳಾಗಿವೆ. ಆದರೆ ಮುಂಗಡ ಪತ್ರದಲ್ಲಿ ಈ ಕ್ಷೇತ್ರಗಳಿಗೆ ಕಡಿಮೆ ಅನುದಾನ ಒದಗಿಸಲಾಗುತ್ತಿದೆ ಎಂದು ದೂರಿದರು.

ಆರೋಗ್ಯಕ್ಕೆ ಸಂಬಂಧಿಸಿದ ಯೋಜನೆಗಳ ಅನುಷ್ಠಾನದಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಪ್ರಮುಖವಾಗಿದೆ ಎಂದು ಆಲ್ ಇಂಡಿಯಾ ಯುಟಿಯುಸಿ ರಾಜ್ಯ ಸಮಿತಿ ಸದಸ್ಯ ಎನ್.ಎಸ್. ವೀರೇಶ್ ಹೇಳಿದರು.

ಬೆಲೆ ಏರಿಕೆಗೆ ಅನುಗುಣವಾಗಿ ಸರ್ಕಾರ ಕಾರ್ಮಿಕರಿಗೆ ಕನಿಷ್ಠ ವೇತನ ಒದಗಿಸಬೇಕು. ಆಶಾ ಕಾರ್ಯಕರ್ತೆಯರಿಗೆ ಉಚಿತ ಮೊಬೈಲ್, ಸಿಮ್ಕಾರ್ಡ್ ನೀಡಬೇಕು. ಪಿಯುಸಿ ಪೂರೈಸಿದ ಕಾರ್ಯಕರ್ತೆಯರಿಗೆ ನರ್ಸ್ ಉಚಿತ ತರಬೇತಿ ಹಾಗೂ ಉನ್ನತ ವ್ಯಾಸಂಗ ನೆರವು ಕಲ್ಪಿಸಬೇಕು. ಪ್ರತಿ ತಿಂಗಳು ಕನಿಷ್ಠ ₨ 1ಸಾವಿರ ಪ್ರೋತ್ಸಾಹಧನ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಕಾರ್ಯದರ್ಶಿ ಮಹಾದೇವಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಜಿಲ್ಲಾ ಅಧ್ಯಕ್ಷ ಮಹೇಶ್ ನಾಡಗೌಡ ಅಧ್ಯಕ್ಷತೆ ವಹಿಸಿದ್ದರು. ಆಶಾ ಕಾರ್ಯಕರ್ತೆಯರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.