ಭಾನುವಾರ, ಜೂನ್ 13, 2021
23 °C

‘ಸಮಯ ಸದ್ಬಳಕೆ ಮಾಡಿಕೊಳ್ಳಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಸಮಯದ ಸದುಪಯೋಗ ಮಾಡಬೇಕು ಎಂದು ಸಿರಿಗನ್ನಡ ವೇದಿಕೆಯ ಜಿಲ್ಲಾ ಅಧ್ಯಕ್ಷ ಜಿ.ಎಸ್.ಗೋನಾಳ ಹೇಳಿದರು.ನಗರದ ಸಿಪಿಎಸ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ 77ನೇ ಶಾಲಾ ವಾರ್ಷಿಕೊತ್ಸವ, 8ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸಾಂಸ್ಕೃತಿಕ ಹಬ್ಬ ಉದ್ಘಾಟಿಸಿ ಮಂಗಳವಾರ ಅವರು ಮಾತನಾಡಿದರು.ವಿದ್ಯಾರ್ಥಿಗಳ ಜೀವನದಲ್ಲಿ ಸಮಯ ಬಹಳ ಮಹತ್ವದ್ದಾಗಿದೆ. ಸಮಯವನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು. ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಶಿಕ್ಷಣ ಮಹತ್ವದ ಪಾತ್ರವನ್ನು ನಿರ್ವಹಿಸುತ್ತದೆ ಎಂದರು.ಇಂದು ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಿಂತ ಯಾವುದೇ ರೀತಿಯಲ್ಲಿ ಹಿಂದುಳಿಯದೇ ಪೈಪೋಟಿ ನೀಡುತ್ತಿವೆ. ಸರ್ಕಾರವು ಇಂದು ಶಿಕ್ಷಣದ ಅಭಿವೃದ್ಧಿಗಾಗಿ ಕೋಟ್ಯಂತರ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ. ಅದರ ಸರಿಯಾದ ರೀತಿಯ ಬಳಕೆಯಾಗಬೇಕಾದರೆ ಪ್ರತಿಯೊಬ್ಬ ವಿದ್ಯಾರ್ಥಿಯು  ಉತ್ತಮ ಶಿಕ್ಷಣವನ್ನು ಪಡೆಯಬೇಕು. ಶಿಕ್ಷಣ ಕ್ಷೇತ್ರದಲ್ಲಿ ಏನಾದರೂ ಬದಲಾವಣೆ ತರಬಯಸುವುದಾದರೇ ಪಾಲಕರು, ಶಿಕ್ಷಕರು ಹಾಗೂ ಸಮುದಾಯದವರು ಪರಸ್ಪರ ಕೊಂಡಿಯಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಸಾಧ್ಯ. ದೇಶದಲ್ಲಿ ಹುಟ್ಟಿದ ಪ್ರತಿಯೊಬ್ಬ ಪ್ರಜೆಯೂ ದೇಶದ ಅಭಿವೃದ್ಧಿಗಾಗಿ ಒಂದಲ್ಲ ಒಂದು ರೀತಿಯಲ್ಲಿ ಕೊಡುಗೆ ನೀಡಬೇಕು ಎಂದು ಹೇಳಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಪೂಜಾರ ಮಾತನಾಡಿ, ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಶಿಕ್ಷಣ ಹಕ್ಕು ಕಾಯ್ದೆ ಜಾರಿಗೆ ತರಲಾಗಿದೆ. ಈ ಕಾಯ್ದೆಯ ಸರಿಯಾದ ಅನುಷ್ಠಾನದಲ್ಲಿ ಪ್ರತಿಯೊಬ್ಬ ಶಿಕ್ಷಕರ, ಪಾಲಕರ ಜವಾಬ್ದಾರಿಯು ಹೆಚ್ಚಿನದಾಗಿದ್ದು, ಪ್ರತಿಯೊಬ್ಬರೂ ಕೂಡಾ ಶ್ರಮಿಸಬೇಕು ಎಂದು ಹೇಳಿದರು.ಮುಖ್ಯಶಿಕ್ಷಕ ಭರಮಪ್ಪ ಕಟ್ಟಿಮನಿ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಅಂಗವಿಕಲ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಬೀರಪ್ಪ ಅಂಡಗಿ ಚಿಲವಾಡಗಿ, ಬಿ.ಆರ್.ಪಿ.ಪ್ರಭುರಾಜ ಬಳಿಗಾರ, ಶಿಕ್ಷಕರಾದ ನಾಗಪ್ಪ ನರಿ, ಸಾವಿತ್ರಿದಾಸ, ವಿಜಯಾ, ರತ್ನಾ, ಗೌಸೀಯಾಬೆಗಂ, ಗಂಗಮ್ಮ, ವಿಜಯಲಕ್ಷ್ಮೀ, ಮೋಹಿನ್‍ಪಾಷಾಬೀ ಹಾಜರಿದ್ದರು.

ಶಿಕ್ಷಕ ಗುರುರಾಜ ಕಟ್ಟಿ ಕಾರ್ಯಕ್ರಮ  ನಿರೂಪಿಸಿದರು. ಶ್ರೀನಿವಾಸರಾವ್ ಕುಲಕರ್ಣಿ ಸ್ವಾಗತಿಸಿದರು. ವಿರೂಪಾಕ್ಷಪ್ಪ ಬಾಗೋಡಿ ವಂದಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.