‘ಸಮಸ್ಯೆ ಪರಿಹಾರಕ್ಕೆ 350 ಗ್ರಾಮ ಪಂಚಾಯಿತಿಗಳಿಗೆ ಭೇಟಿ’

7

‘ಸಮಸ್ಯೆ ಪರಿಹಾರಕ್ಕೆ 350 ಗ್ರಾಮ ಪಂಚಾಯಿತಿಗಳಿಗೆ ಭೇಟಿ’

Published:
Updated:

ಪಿರಿಯಾಪಟ್ಟಣ: ಕಾಂಗ್ರೆಸ್‌ ಪಕ್ಷದಲ್ಲಿ ಪ್ರಾಮಾಣಿಕ ವಾಗಿ ದುಡಿದರೆ ಪ್ರತಿಫಲ ಖಂಡಿತ ದೊರೆಯಲಿದೆ ಎನ್ನುವುದಕ್ಕೆ ನಾನೇ ಸಾಕ್ಷಿ ಎಂದು ವಿಧಾನಪರಿಷತ್ ಸದಸ್ಯ ಆರ್. ಧರ್ಮಸೇನ ತಿಳಿಸಿದರು.ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಂಗಳವಾರ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕಳೆದ 3 ಅವಧಿಯಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷನಾಗಿ ಪ್ರ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿ ಕೊಂಡು ಬಂದಿದ್ದು, ತಮ್ಮ ಪ್ರಾಮಾಣಿಕತೆಗೆ ಮತದಾರರು ಬೆಂಬಲಿಸಿದ್ದಾರೆ ಎಂದರು.ವಿಧಾನಪರಿಷತ್ ವ್ಯಾಪ್ತಿಯಲ್ಲಿ 350 ಗ್ರಾಮ ಪಂಚಾಯಿತಿಗಳಿದ್ದು, ಪ್ರತಿ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಸಮಸ್ಯೆಗಳ ಬಗ್ಗೆ ಅರಿತು, ತಮ್ಮ ವಿಧಾನಪರಿಷತ್ ಅನುದಾನದಲ್ಲಿ ಆದ್ಯತೆ ಮೇರೆಗೆ ಪರಿಹರಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.ಮಾಜಿ ಶಾಸಕ ಎಚ್.ಸಿ. ಬಸವರಾಜ್ ಮಾತನಾಡಿ, ಧರ್ಮಸೇನ ಅವರು ರಾಜಕೀಯ ಕುಟುಂಬ ದಿಂದಲೇ ಬಂದವರಾಗಿದ್ದು ನಮ್ಮ ನಿಮ್ಮೊಳಗಿರುವ ವ್ಯಕ್ತಿಯಾಗಿ ದ್ದಾರೆ. ಮೈಸೂರು ಮತ್ತು ಚಾಮರಾಜನಗರ ವ್ಯಾಪ್ತಿಯ ಮತದಾರರು ಅವರನ್ನು ಬೆಂಬಲಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಕೈ ಬಲಪಡಿಸಿದಂತಾಗಿದೆ ಎಂದು ತಿಳಿಸಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾನ್ಸೂನ್ ಚಂದ್ರು, ಎಸ್ಸಿ ಘಟಕದ ಅಧ್ಯಕ್ಷ ಪಿ. ಮಹದೇವ್, ತಾಲ್ಲೂಕು ಪಂಚಾಯಿತಿ ಸದಸ್ಯರಾದ ನವಿಲೂರು ಮಹದೇವ್, ಆರ್.ಸಿ. ಚಂದ್ರು, ಕೆಪಿಸಿಸಿ ಸದಸ್ಯ ಡಿ.ಟಿ. ಸ್ವಾಮಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ನಿಲಂಗಾಲ ಜಯಣ್ಣ, ವೆಂಕಟೇಶ್, ಎಪಿಎಂಸಿ ಅಧ್ಯಕ್ಷ ಕೆ. ಹೊಲದಪ್ಪ, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಲಕ್ಷ್ಮೇಗೌಡ, ಮಾಜಿ ಜಿಲ್ಲಾ ಯುವಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್, ಪಟ್ಟಣ ಪಂಚಾಯಿತಿ ಸದಸ್ಯ ಸಣ್ಣಪ್ಪನಾಯಕ, ಮಹಮ್ಮದ್ ಶಫಿ, ಲಕ್ಷ್ಮೀನಾರಾಯಣ್, ಕಿತ್ತೂರು ಕೃಷ್ಣೇಗೌಡ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry