ಶನಿವಾರ, ಜನವರಿ 18, 2020
26 °C

‘ಸರ್ಕಾರಿ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಉಚಿತ ಸೈಕಲ್ ವಿತರಣೆ, ಕ್ಷೀರ ಭಾಗ್ಯ ಯೋಜನೆ, ಉಚಿತ ಪಠ್ಯ ಪುಸ್ತಕ ವಿತರಣೆ ಯಂತಹ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಜೀವನ ದಲ್ಲಿ ಒಂದು ಗುರಿಯಿಟ್ಟುಕೊಂಡು ಅಧ್ಯಯನ ಮಾಡ ಬೇಕು ಎಂದು ವಿಧಾನ ಪರಿಷತ್ ಸದಸ್ಯೆ ಗಾಯಿತ್ರಿ ಶಾಂತೇಗೌಡ ಕರೆ ನೀಡಿದರು.ನಗರದ ಬೇಲೂರು ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ, ಪ್ರೌಢ ಶಾಲಾ ವಿಭಾಗದಲ್ಲಿ ಗುರುವಾರ 2013-14 ನೇ ಸಾಲಿನ ತಾಲ್ಲೂಕು ಮಟ್ಟದ ಉಚಿತ ಸೈಕಲ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇದೊಂದು ಸರ್ಕಾರದ ಅತ್ಯುತ್ತಮ ಯೋಜನೆ. ಸರ್ಕಾರದಿಂದ ಕೊಡುವ ಎಲ್ಲಾ ಸೌಲಭ್ಯಗಳನ್ನು ಉಪಯೋಗಿ ಸಿಕೊಂಡು ವಿದ್ಯಾರ್ಥಿಗಳೆಲ್ಲರೂ, ಶಾಲೆಗೆ ಸರಿಯಾದ ವೇಳೆಯಲ್ಲಿ ಬರಬೇಕು ಎಂದು ಹೇಳಿದರು.ಇಂದಿನ ವಿದ್ಯಾರ್ಥಿಗಳು ದೃಶ್ಯ ಮಾಧ್ಯಮದ ಆಕರ್ಷಣೆಗೆ ಮಾರು ಹೋಗಿದ್ದು, ಓದಿನ ಬಗ್ಗೆ ಆಸಕ್ತಿ ಕಡಿಮೆ ಮಾಡಿಕೊಳ್ಳುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಪೋಷಕರು ಈ ಬಗ್ಗೆ ಗಮನ ಹರಿಸಿ, ಮಕ್ಕಳ ಓದಿನ ಕಡೆಗೆ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಿದ ಶಾಸಕರಾದ ಸಿ.ಟಿ.ರವಿ ಅವರು ಮಾತನಾಡಿ, ಮಕ್ಕಳು ಸರ್ಕಾರ ನೀಡಿರುವ ಸೈಕಲ್ ಅನ್ನು ಅನ್ಯ ಉದ್ದೇಶಕ್ಕೆ ಬಳಸಲು ಪೋಷಕರಿಗೆ ನೀಡದೆ, ತಮ್ಮ ಶಿಕ್ಷಣ ಕಲಿಕೆಗೆ ಪೂರಕವಾಗಿ ಬಳಸಿಕೊಳ್ಳಬೇಕು. ಸಮಯಕ್ಕೆ ಸರಿಯಾಗಿ ತರಗತಿಗೆ ಹಾಜ ರಾಗಬೇಕು ಎಂದು ಸಲಹೆ ನೀಡಿದರು.ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಅಂಬಿಕಾ ಶಿವಕುಮಾರ್, ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಮಾತನಾಡಿದರು. ಶಾಲೆಯ ಉಪಪ್ರಾಚಾರ್ಯರಾದ ಡಿ.ಎಸ್.ಪುಟ್ಟಸ್ವಾಮಿಗೌಡ, ಪ್ರೌಢ ಶಾಲಾ ಶಿಕ್ಷಕರ ಸಂಘದ ಪದಾಧಿ ಕಾರಿಗಳು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.ಶಿಕ್ಷಕರಾದ ಎನ್.ಟಿ. ಮಮತ ನಿರೂಪಿಸಿದರು. ಮಂಜುನಾಥ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಷಡಕ್ಷರಿ ವಂದಿಸಿದರು.

ಪ್ರತಿಕ್ರಿಯಿಸಿ (+)