‘ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ನೀಡಿ’

6

‘ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ನೀಡಿ’

Published:
Updated:

ಸಾಗರ:  ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಯಾಗುವವರಗೆ ಕ್ಯಾಬಿನೆಟ್‌ ದರ್ಜೆಯ ಸಚಿವ ಸ್ಥಾನಮಾನ ನೀಡಿ ಅವರಿಗೆ ಕೊಡುವ ಎಲ್ಲಾ ಸವಲತ್ತು ಸರ್ಕಾರ ಒದಗಿಸಬೇಕು ಎಂದು ಕನ್ನಡ ಚಳವಳಿ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್ ಒತ್ತಾಯಿಸಿದ್ದಾರೆ.ಶುಕ್ರವಾರ ಇಲ್ಲಿಗೆ ಭೇಟಿ ನೀಡಿ  ಮಡಿಕೇರಿಯಲ್ಲಿ ನಡೆಯಲಿರುವ 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನಿಯೋಜಿತರಾಗಿರುವ ಸಾಹಿತಿ ಡಾ.ನಾ.ಡಿಸೋಜ ದಂಪತಿಯನ್ನು ಅಭಿನಂದಿಸಿ ಅವರು ಮಾತನಾಡಿದರು.ಸಾಹಿತ್ಯ ಸಮ್ಮೇಳನ ನಡೆಯುವ ಮೂರು ದಿನಗಳ ಕಾಲ ಸಮ್ಮೇಳನದ ಅಧ್ಯಕ್ಷರನ್ನು ಹಾಡಿ ಹೊಗಳಿ ಮೆರವಣಿಗೆ ಮಾಡಿದರೆ ಸಾಲದು. ಸಮ್ಮೇಳನ ಮುಗಿದ ನಂತರವೂ ಅವರಿಗೆ ಸೂಕ್ತ ಗೌರವ ಸಲ್ಲಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಮ್ಮೇಳನದ ಅಧ್ಯಕ್ಷರಾ ಗುವವರಿಗೆ ರಾಜ್ಯದ ಸಚಿವರಿಗೆ ನೀಡುವ ಒಂದು ವಾಹನ ಹಾಗೂ ಒಬ್ಬ ಸಹಾಯಕರನ್ನು ಒದಗಿಸಬೇಕು ಎಂದು ಆಗ್ರಹಿಸಿದರು.ಅಭಿನಂದನೆ ಸ್ವೀಕರಿಸಿದ ಸಾಹಿತಿ ಡಾ.ನಾ.ಡಿಸೋಜ ಮಾತನಾಡಿ, ಸಾಹಿತ್ಯ ಸಮ್ಮೇಳನಕ್ಕೆ ಹಣ ನೀಡಿ ಸರ್ಕಾರ ಸುಮ್ಮನಾಗಬಾರದು. ಸಮ್ಮೇಳನದಲ್ಲಿ ಕೈಗೊಳ್ಳುವ ನಿರ್ಣಯದ ಅನುಷ್ಠಾನ ಸೇರಿದಂತೆ ಒಟ್ಟಾರೆ ಸಮ್ಮೇಳನದ ನಿರ್ವಹಣೆಗೆ ಅಧಿಕಾರಿಗಳನ್ನು ನೇಮಿಸಬೇಕು ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry