ಮಾನ್ವಿ: ಗ್ರಾಮೀಣ ಪ್ರದೇಶಗಳಲ್ಲಿ ಹಮ್ಮಿಕೊಳ್ಳಲಾಗುವ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಮೂಡಿಸಲು ಸಹಕಾರಿ ಎಂದು ಶಾಸಕ ಜಿ.ಹಂಪಯ್ಯ ನಾಯಕ ಹೇಳಿದರು.

ಭಾನುವಾರ ತಾಲ್ಲೂಕಿನ ಬೆಟ್ಟದೂರು ಗ್ರಾಮದಲ್ಲಿ ಮಾನ್ವಿಯ ಗಾಂಧಿ ಸ್ಮಾರಕ ಶಿಕ್ಷಣ ಸಂಸ್ಥೆಯ ಎಸ್ಆರ್ಎಸ್ವಿ ಪದವಿ ಕಾಲೇಜಿನ ಎನ್ನೆಸ್ಸೆಸ್ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಚಾಮರಸ ಮಾಲೀಪಾಟೀಲ್ ಮಾತನಾಡಿ, ಗ್ರಾಮಸ್ಥರಲ್ಲಿ ಪರಿಸ ಸಂರಕ್ಷಣೆ, ಸ್ವಚ್ಛತೆ ಮತ್ತಿತರ ಸಂಗತಿಗಳ ಕುರಿತು ಎನ್ನೆಸ್ಸೆಸ್ ಶಿಬಿರಗಳಿಂದ ಜಾಗೃತಿ ಮೂಡಿಸಲು ಸಾಧ್ಯ ಎಂದರು.
ಶಿಬಿರಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಕಾಲೇಜಿನ ಪ್ರಾಚಾರ್ಯ ಈರಣ್ಣ ಮರ್ಲಟ್ಟಿ ಪೋತ್ನಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಹನುಮೇಶ ಮದ್ಲಾಪುರ, ಶಿಬಿರದ ಅಧಿಕಾರಿ ತಾಯಪ್ಪ ಬಿ.ಹೊಸೂರು, ಗ್ರಾಪಂ ಅಧ್ಯಕ್ಷ ವೆಂಕಟೇಶ, ಸಿರವಾರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯ್ಯನಗೌಡ ಜಂಬಲದಿನ್ನಿ, ಮಹಾಂತೇಶ ಸ್ವಾಮಿ ರೌಡೂರು, ಚೆನ್ನಬಸವ ಬೆಟ್ಟದೂರು, ಎಂ.ಶಂಕ್ರಪ್ಪ, ಜಿ.ನಾಗರಾಜ, ಎಸ್ಡಿಎಂಸಿ ಅಧ್ಯಕ್ಷ

ಬಿ.ವೀರೇಶ, ಮಹರ್ಷಿ ವಾಲ್ಮೀಕಿ ಸಂಘದ ಅಧ್ಯಕ್ಷ ಬಸವರಾಜ ನಾಯಕ ಮತ್ತಿತರರು ಉಪಸ್ಥಿತರಿದ್ದರು. ಉಪನ್ಯಾಸಕ ಶರಣಯ್ಯ ಸ್ವಾಮಿ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.