ಶುಕ್ರವಾರ, ಜೂನ್ 25, 2021
22 °C

‘ಸೋಲು ಸ್ವೀಕರಿಸಿ–ಗೆಲುವಿಗೆ ಹರ್ಷ ಪಡಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನೆಲಮಂಗಲ: ‘ಅಸೂಯೆಯಿಂದ ದೂರವಿರುವ, ಸೋಲನ್ನು ಸ್ವೀಕರಿಸುವ ಮತ್ತು ಗೆಲುವಿನಲ್ಲಿ ಹರ್ಷ ಪಡುವುದನ್ನು ಮಕ್ಕಳಿಗೆ ಕಲಿಸುವ ಗುರುತರ ಜವಾಬ್ದಾರಿ ಶಿಕ್ಷಕ ಮತ್ತು ಪಾಲಕರಿಗೆ ಇದೆ’ ಎಂದು ಗೋಪಾಲಪುರ ವಿಎಸ್‌ಎಸ್‌ಎನ್‌ ಬ್ಯಾಂಕ್‌ ಅಧ್ಯಕ್ಷ  ವಿ.ರಾಮಸ್ವಾಮಿ ತಿಳಿಸಿದರು.ಇಲ್ಲಿಗೆ ಸಮೀಪದ ಗೋಪಾಲಪುರದ ಗ್ರಾಮ ಪಂಚಾಯ್ತಿ ವತಿಯಿಂದ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಿದ್ದ ಗ್ರಾಮ ಸಭೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಸಮವಸ್ತ್ರ, ಶೂ, ಬೆಲ್ಟ್‌, ಟೈ ವಿತರಿಸಿ ಮಾತನಾಡಿದರು.ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸಿದ್ದಬಸಮ್ಮ, ‘ಸ್ವಯಂ ಉದ್ಯೋಗ ಕೈಗೊಳ್ಳಲು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಿರುದ್ಯೋಗಿ ಯುವಕರಿಗೆ ಉಚಿತ ತರಬೇತಿ ನೀಡಿ ಆರ್ಥಿಕ ಸಹಕಾರ ನೀಡಲಾಗುತ್ತಿದೆ’ ಎಂದರು.ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ಮಂಜುಳಾ, ಅಭಿವೃದ್ಧಿ ಅಧಿಕಾರಿ ಗಿರೀಶ್‌, ಸದಸ್ಯರಾದ ಲಕ್ಷ್ಮೀದೇವಮ್ಮ, ಲಕ್ಷ್ಮಣ, ನಾಗರಾಜ್‌, ಮುನಿರಾಜು, ಕೆ.ಸಿ.ರಾಜು, ಸೌಭಾಗ್ಯ, ಪಾರ್ವತಮ್ಮ ಇದ್ದರು.ಈ ಸಂದರ್ಭ ₨7.5ಲಕ್ಷ ವೆಚ್ಚದಲ್ಲಿ ಗೋಪಾಲಪುರ, ಶ್ಯಾಮಭಟ್ಟರಪಾಳ್ಯ, ತೋಟಗೆರೆಯಲ್ಲಿ ನಿರ್ಮಿಸಿದ ಬಸ್‌ ನಿಲ್ದಾಣಗಳನ್ನು ಉದ್ಘಾಟಿಸಲಾಯಿತು. ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸರ್ಕಾರಿ ಶಾಲಾ ಶಿಕ್ಷಕರನ್ನು ಮತ್ತು ಗ್ರಾಮ ಪಂಚಾಯ್ತಿ ನೌಕರರನ್ನು ಸನ್ಮಾನಿಸಲಾಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.