ಗೋಣಿಕೊಪ್ಪಲು: ದೇಶದ ಸಂಪತ್ತನ್ನು ಬ್ರಿಟೀಷರು ಕೊಳ್ಳೆ ಹೊಡೆದಿದ್ದರೂ, ಸ್ವಾತಂತ್ರ್ಯ ನಂತರ ದೀರ್ಘಾವಧಿ ಆಳಿದ ಕಾಂಗ್ರೆಸ್ ಪಕ್ಷ ಸಂಪನ್ಮೂಲ ಕ್ರೋಡೀಕರಿಸಿಕೊಂಡು ದೇಶವನ್ನು ಹಸಿವು ಮುಕ್ತ ರಾಷ್ಟ್ರವನ್ನಾಗಿ ಮಾಡಲು ಶ್ರಮಿಸಿದೆ ಎಂದು ಕೊಡಗು, ಮೈಸೂರು ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ಎಚ್. ವಿಶ್ವನಾಥ್ ಅಭಿಪ್ರಾಯ ವ್ಯಕ್ತಪಡಿಸಿದರು.

ಗೋಣಿಕೊಪ್ಪಲು ಪಟ್ಟಣದಲ್ಲಿ ಸೋಮವಾರ ನಡೆದ ಪಕ್ಷದ ಚುನಾವಣಾ ಪ್ರಚಾರ ಪಾದಯಾತ್ರೆಯಲ್ಲಿ ಅವರು ಮಾತನಾಡಿದರು.

ಸ್ಥಳೀಯ ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೊಳ್ಳಿಮಾಡ ಅಜಿತ್ ಅಯ್ಯಪ್ಪ ಮಾತನಾಡಿ, ವಿದ್ಯುತ್, ನೀರಾವರಿ, ಮನೆ, ರಸ್ತೆ, ಕೃಷಿ ಮತ್ತು ಕೈಗಾರಿಕಾ ಅಭಿವೃದ್ಧಿಗೆ ಒತ್ತು ಕೊಡಲಾಗಿದೆ. ಕಳೆದ 10 ವರ್ಷಗಳ ಅವಧಿಯಲ್ಲಿ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಬಹಳಷ್ಟು ಯೋಜನೆಗಳನ್ನು ರೂಪಿಸಿ ಅವುಗಳನ್ನು ಸಮರ್ಥವಾಗಿ ಜಾರಿಗೆ ತರಲಾಗಿದೆ. ಗ್ರಾಮೀಣ ಅಭಿವೃದ್ಧಿಗೆ ಮಹಾತ್ಮಗಾಂಧಿ ಉದ್ಯೋಗ್ಯ ಖಾತ್ರಿ ಯೋಜನೆ ಮಹತ್ವ ಪೂರ್ಣವಾದುದು. ಇದು ಯುಪಿಎ ಸರ್ಕಾರದ ಸಾಧನೆ ಎಂದು ಹೇಳಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಪ್ರದೀಪ್ ಮಾತನಾಡಿ, ಸಂಸದರಾಗಿದ್ದ ಎಚ್. ವಿಶ್ವನಾಥ್ ಅವರು, ಅವರ ಅವಧಿಯಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ತಮ್ಮ ಅನುದಾನದಲ್ಲಿ ಕೊಡಗಿನ ಹಲವು ಗ್ರಾಮಗಳ ರಸ್ತೆಗಳನ್ನು ಅಭಿವೃದ್ಧಿಪಡಿಸಿದ್ದಾರೆ. ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಮತ್ತು ಬಡವರ ಪರವಾಗಿ ಕೆಲಸ ಮಾಡುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತನೀಡಬೇಕು ಎಂದು ಹೇಳಿದರು.

ಮುಖಂಡರಾದ ಬಿ.ಎನ್. ಪ್ರಕಾಶ್, ಕೃಷ್ಣಪ್ಪ, ಕೆಪಿಸಿಸಿ ಸದಸ್ಯೆ ಮಲ್ಲಾಜಮ್ಮ, ಪದ್ನಿನಿ ಪೊನ್ನಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಶಿವು ಮಾದಪ್ಪ, ಪರಿಶಿಷ್ಟ ಜಾತಿ ಮತ್ತು ಪಂಗಡದ ಜಿಲ್ಲಾ ಅಧ್ಯಕ್ಷ ಪಾಪುಸಣ್ಣಯ್ಯ, ಜಿಲ್ಲಾ ಪಂಚಯಿತಿ ಸದಸ್ಯ ಎಂ.ಎಸ್. ವೆಂಕಟೇಶ್ ಮುಂತಾದವರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.