‘ಹಾಸ್ಯೋತ್ಸವ’ ನಾಳೆ

ಬೆಂಗಳೂರು: ‘ಕರ್ನಾಟಕ ಅಂಧರ ಕ್ಷೇಮಾಭ್ಯುದಯ ಸಂಸ್ಥೆಯ ಸಾಮಾಜಿಕ ಕಾರ್ಯ ಚಟುವಟಿಕೆಗಳಿಗೆ ನಿಧಿ ಸಂಗ್ರಹಿಸುವ ಉದ್ದೇಶದಿಂದ ಭಾನುವಾರ (ಜ. 17) ನಗರದಲ್ಲಿ ‘ಹಾಸ್ಯೋತ್ಸವ’ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಸಂಸ್ಥೆಯ ಕಾರ್ಯದರ್ಶಿ ಅಮರನಾಥ್ ತಿಳಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಾಸ್ಯ ಕಲಾವಿದರಾದ ಗಂಗಾವತಿ ಪ್ರಾಣೇಶ್, ನರಸಿಂಹ ಜೋಷಿ, ಬಸವರಾಜ ಮಹಾಮನಿ ಅವರು ಹಾಸ್ಯೋತ್ಸವ ನಡೆಸಿಕೊಡಲಿದ್ದಾರೆ. ಸಂಸ್ಥೆಯ ಅಂಧ ಮಕ್ಕಳು ಸಹ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಜತೆಗೆ, ‘ಸಿಕ್ಸ್ ಪ್ಯಾಕ್ ಗಣಪ’ ಎಂಬ ಕಿರುನಾಟಕ ಪ್ರದರ್ಶಿಸಲಿದ್ದಾರೆ’ ಎಂದು ಹೇಳಿದರು.
‘ಹಾಸ್ಯೋತ್ಸವವು ಆನಂದರಾವ್ ವೃತ್ತದಲ್ಲಿರುವ ಕೆಇಬಿ ಎಂಜಿನಿಯರುಗಳ ಸಂಘದ ಕಟ್ಟಡದಲ್ಲಿರುವ ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ಆರಂಭವಾಗಲಿದೆ’ ಎಂದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.