ಶನಿವಾರ, ಮಾರ್ಚ್ 6, 2021
18 °C
ಗೆಲ್ಲಲು ಅರ್ಹತೆ ಇದ್ದವರಿಗೆ ಮಾತ್ರ ಅವಕಾಶ

‘ಹಿಂಬಾಲಕರಿಗೆಲ್ಲ ಟಿಕೆಟ್ ಇಲ್ಲ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ಹಿಂಬಾಲಕರಿಗೆಲ್ಲ ಟಿಕೆಟ್ ಇಲ್ಲ’

ರಾಮನಗರ: ‘ಪಕ್ಷದ ಮುಖಂಡರ ಹಿಂಬಾಲಕರು ಎಂದು ಹೇಳಿಕೊಂಡು ಬರುವವರಿಗೆಲ್ಲ ಟಿಕೇಟ್‌ ನೀಡಲು ಆಗುವುದಿಲ್ಲ. ಗೆಲ್ಲುವ ಶಕ್ತಿ, ಸಾಮರ್ಥ್ಯ ಇರುವವರಿಗೆ ಮಾತ್ರ ಟಿಕೇಟ್‌ ನೀಡಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ತಿಳಿಸಿದರು.ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಬಿಡದಿಯ ಎಸ್‌.ಬಿ. ಕನ್ವೆನ್ಷನ್‌ ಹಾಲ್‌ನಲ್ಲಿ ಗುರುವಾರ ನಡೆದ ಕಾಂಗ್ರೆಸ್‌ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.‘ಡಿ.ಕೆ. ಶಿವಕುಮಾರ್‌, ಡಿ.ಕೆ.ಸುರೇಶ್‌, ಸಿ.ಎಂ.ಲಿಂಗಪ್ಪ ಮತ್ತು ಇತರರ ಮುಖಂಡರ ಹಿಂಬಾಲಕರು ಎಂದು ಹೇಳಿಕೊಂಡು ಬರುವವರಿಗೆ ಯಾವುದೇ ಕಾರಣಕ್ಕೂ ಟಿಕೆಟ್‌ ನೀಡುವುದಿಲ್ಲ. ಹಾಗಾಗಿ ಮುಖಂಡ ಹೆಸರನ್ನು ಯಾರೂ ಬಳಸಿಕೊಳ್ಳಬಾರದು’ ಎಂದು ಅವರು ಎಚ್ಚರಿಸಿದರು.ಚುನಾವಣೆಯಲ್ಲಿ ಗೆಲುವು ಮುಖ್ಯವಾಗಿದ್ದು, ಗೆಲ್ಲಲು ಅರ್ಹ ಇರುವವರಿಗೆ ಮಾತ್ರ ಟಿಕೆಟ್‌ ನೀಡಲಾಗುವುದು ಎಂದು ಅವರು ಹೇಳಿದರು. ಸಂಸದ ಡಿ.ಕೆ.ಸುರೇಶ್‌ ಅವರು ಮಾತನಾಡಿ, ಈ ಚುನಾವಣೆಗಳಲ್ಲಿ ಹೆಚ್ಚಿನ ಸಂಖ್ಯೆಯ ಕಾಂಗ್ರೆಸ್‌ ಅಭ್ಯರ್ಥಿಗಳು ಆಯ್ಕೆಯಾಗುವಂತೆ ಮಾಡುವ ಜವಾಬ್ದಾರಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಮೇಲಿದೆ ಎಂದರು.ಆಕಾಂಕ್ಷಿಗಳ ಪಟ್ಟಿ ಸಂಗ್ರಹ: ರಾಮನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಬೈರಮಂಗಲ, ಕಸಬಾ, ಕೂಟಗಲ್‌, ಕೈಲಾಂಚ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿಗೆ ಹಾಗೂ ರಾಮನಗರ ತಾಲ್ಲೂಕು ಪಂಚಾಯಿತಿಯ ಎಲ್ಲ 14 ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಆಕಾಂಕ್ಷಿ ಅಭ್ಯರ್ಥಿಗಳ ಪಟ್ಟಿಯನ್ನು ಕಾರ್ಯಕರ್ತರ ಸಮ್ಮುಖದಲ್ಲಿ ಸಭೆಯಲ್ಲಿ ಸಿದ್ಧಪಡಿಸಲಾಯಿತು.ಒಂದು ಕ್ಷೇತ್ರಕ್ಕೆ ಇಬ್ಬರು ಅಥವಾ ಮೂವರು ಆಕಾಂಕ್ಷಿಗಳ ಹೆಸರನ್ನು ಪಟ್ಟಿಯಲ್ಲಿ ಸೇರಿಸಲಾಗಿದ್ದು, ಅಂತಿಮವಾಗಿ ವರಿಷ್ಠರು ಕುಳಿತು ಯಾರಿಗೆ ಟಿಕೇಟ್‌ ನೀಡಬೇಕು ಎಂಬುದನ್ನು ನಿರ್ಧರಿಸುತ್ತಾರೆ ಎಂದು ಗೊತ್ತಾಗಿದೆ.ಕೆಪಿಸಿಸಿ ವೀಕ್ಷಕರಾದ ಬೆಂಗಳೂರಿನ ಮಾಜಿ ಮೇಯರ್‌ ಪಿ.ಆರ್‌.ರಮೇಶ್‌, ಪದ್ಮಾವತಿ, ಮಾಜಿ ಶಾಸಕ ಸಿ.ಎಂ.ಲಿಂಗಪ್ಪ, ಕೆಪಿಸಿಸಿ ಸದಸ್ಯ ಎ. ಮಂಜು, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸೈಯದ್‌ ಜಿಯಾವುಲ್ಲಾ, ಉಪಾಧ್ಯಕ್ಷ ಎಲ್‌. ಚಂದ್ರಶೇಖರ್, ರಾಜ್ಯ ಯುವ ಕಾಂಗ್ರೆಸ್‌ ಸಮಿತಿಯ ಪ್ರಧಾನ ಕಾರ್ಯದರ್ಶಿ ಗಾಣಕಲ್‌ ನಟರಾಜ್‌ ಭಾಗವಹಿಸಿದ್ದರು.ಮಾಗಡಿ: ಇಂದು ಸಭೆ

ಮಾಗಡಿ ತಾಲ್ಲೂಕಿನ ಜಿ.ಪಂ ಮತ್ತು ತಾ.ಪಂ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಮಾಗಡಿಯಲ್ಲಿ ಶುಕ್ರವಾರ ಸಂಸದ ಡಿ.ಕೆ.ಸುರೇಶ್‌ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.