ಶುಕ್ರವಾರ, ಮೇ 27, 2022
31 °C

1ನೇ ತರಗತಿಯಿಂದ ಆಂಗ್ಲ ಮಾಧ್ಯಮಕ್ಕೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೇವನಹಳ್ಳಿ: ಸರ್ಕಾರಿ ಕನ್ನಡ ಶಾಲೆಗಳಲ್ಲಿ ಪ್ರಾಥಮಿಕ ಹಂತದ ಒಂದನೇ ತರಗತಿಯಿಂದಲೇ ಆಂಗ್ಲ ಮಾಧ್ಯಮ ಭೋದನೆ ಜಾರಿಗೆ ತರಬೇಕೆಂದು ಭಾರತ ಜನಜಾಗೃತಿ ಸೇನೆ ಸಂಸ್ಥಾಪಕ ಅಧ್ಯಕ್ಷ ಸಿ.ಮುನಿಯಪ್ಪ ಆಗ್ರಹಿಸಿದರು.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ತಳಮಟ್ಟದಿಂದಲೇ ಆಂಗ್ಲ ಮಾಧ್ಯಮ ಜಾರಿಯಾದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ನಗರ ಪ್ರದೇಶದ ವಿದ್ಯಾರ್ಥಿಗಳ ಜೊತೆ ಪೈಪೋಟಿ ನಡೆಸಲು ಸಾಧ್ಯ.ರೈತರು, ಕೂಲಿ ಕಾರ್ಮಿಕರು ಆರ್ಥಿಕ ಸಂಕಷ್ಟದಲ್ಲಿಯೂ ತಮ್ಮ ಮಕ್ಕಳು ಆಂಗ್ಲ ಮಾಧ್ಯಮದಲ್ಲೇ ಕಲಿಯಬೇಕೆಂಬ ಹಂಬಲದಿಂದ ಖಾಸಗಿ ಶಾಲೆಗಳ ಮೊರೆ ಹೋಗುತ್ತಿದ್ದಾರೆ. ಇದು ಅನಿವಾರ್ಯವೂ ಆಗಿರುವುದರಿಂದ ಸರ್ಕಾರ ಹಾಗೂ ಶಿಕ್ಷಣ ಮಂತ್ರಿಗಳು ಎಚ್ಚೆತ್ತು ಸರ್ಕಾರಿ ಶಾಲೆಯಲ್ಲಿ ತಳಮಟ್ಟದಿಂದ ಆಂಗ್ಲ ಭಾಷೆ ಕಲಿಕೆಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.ಆಂಗ್ಲ ಮಾಧ್ಯಮ ವಿರೋಧಿಸುತ್ತಿರುವ ಬುದ್ಧಿಜೀವಿಗಳು, ಸಾಹಿತಿಗಳು ಹಾಗೂ ಕನ್ನಡಪರ ಹೋರಾಟಗಾರರು ತಮ್ಮ ಮಕ್ಕಳ ಹಾಗೂ ಕುಟುಂಬದ ಸದಸ್ಯರು ಮೊದಲು ಕನ್ನಡ ಶಾಲೆಗೆ ಕಳುಹಿಸುವ ಇಚ್ಛಾಶಕ್ತಿ ಬೆಳೆಸಿಕೊಳ್ಳಲಿ.

 

ಕನ್ನಡ ಭಾಷೆ ಬಗ್ಗೆ ನಮ್ಮ ವಿರೋಧವಿಲ್ಲ. ಆದರೆ ಬಡವರ ಮಕ್ಕಳ ಮೇಲೆ ಪ್ರೀತಿ ತೋರಿಸಿ ತಮ್ಮ ಮಕ್ಕಳ ಮೇಲೆ ಇಂಗ್ಲಿಷ್ ವ್ಯಾಮೋಹ ಇಟ್ಟುಕೊಳ್ಳುವುದು ಯಾವ ನ್ಯಾಯ ಎಂದು ಪ್ರಧಾನ ಕಾರ್ಯದರ್ಶಿ ಎಂ.ನಾಗರಾಜ್ ಪ್ರಶ್ನಿಸಿದ್ದಾರೆ.ಸರ್ಕಾರ ಇನ್ನಷ್ಟು ಕಠಿಣ ನಿರ್ಧಾರ ತೆಗೆದುಕೊಂಡು ಗ್ರಾಮೀಣ ಮಕ್ಕಳಿಗೆ ನೆರವಾಗಬೇಕು. ಸ್ವಾರ್ಥ ಸಾಹಿತಿಗಳ ಬಗ್ಗೆ ಎಚ್ಚರ ವಹಿಸಲು ಜಾಗೃತಿ ಸೇನೆ ಬೆಂಬಲ ಸೂಚಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.