ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

1 ನಾಮಪತ್ರ ತಿರಸ್ಕೃತ: 24 ಜನ ಕಣದಲ್ಲಿ

Last Updated 19 ಏಪ್ರಿಲ್ 2013, 6:24 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಸಲ್ಲಿಕೆಯಾಗಿದ್ದ ಒಟ್ಟು 36 ನಾಮಪತ್ರಗಳಲ್ಲಿ 35 ನಾಮಪತ್ರಗಳು ಅಂಗೀಕಾರವಾಗಿದ್ದು, 1 ನಾಮಪತ್ರ ತಿರಸ್ಕೃತಗೊಂಡಿದೆ.

ಮಡಿಕೇರಿ ಕ್ಷೇತ್ರದಿಂದ ಕಣಕ್ಕಿಳಿಯಲು ಬಯಸಿದ್ದ ಸ್ವತಂತ್ರ ಮಹಿಳಾ ಅಭ್ಯರ್ಥಿ ಕೆ.ಪಿ. ರಶೀದಾ ಅವರ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಚುನಾವಣಾಧಿಕಾರಿ ಜಿ.ಪ್ರಭು `ಪ್ರಜಾವಾಣಿ'ಗೆ ತಿಳಿಸಿದರು.

ನಿಗದಿತ ಸೂಚಕರ ಸಹಿ ಅಸಮರ್ಪಕವಾಗಿದ್ದರಿಂದ ನಾಮಪತ್ರವನ್ನು ತಿರಸ್ಕರಿಸಲಾಗಿದೆ ಎಂದು ಅವರು ನುಡಿದರು.

ಮಡಿಕೇರಿ ಕ್ಷೇತ್ರದಿಂದ ಕಣಕ್ಕಿಳಿಯಲು ಬಯಸಿ 15 ಅಭ್ಯರ್ಥಿಗಳು 21 ನಾಮಪತ್ರಗಳನ್ನು ಸಲ್ಲಿಸಿದ್ದರು. ತಿರಸ್ಕೃತಗೊಂಡ ನಾಮಪತ್ರವನ್ನು (ಅಭ್ಯರ್ಥಿ) ಹೊರತುಪಡಿಸಿದರೆ ಈಗ 14 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.

ವಿರಾಜಪೇಟೆ ಕ್ಷೇತ್ರದಿಂದ ಆಕಾಂಕ್ಷಿಯಾಗಿದ್ದ 10 ಜನ ಅಭ್ಯರ್ಥಿಗಳು ಸಲ್ಲಿಸಿದ್ದ 15 ನಾಮಪತ್ರಗಳು ಸ್ವೀಕೃತಗೊಂಡಿವೆ.

ಯಾವುದೇ ನಾಮಪತ್ರ ತಿರಸ್ಕೃತಗೊಂಡಿಲ್ಲ ಎಂದು ಚುನಾವಣಾಧಿಕಾರಿ ಅಜ್ಜಪ್ಪ ತಿಳಿಸಿದರು.

ನಾಮಪತ್ರ ವಾಪಸ್ ತೆಗೆದುಕೊಳ್ಳಲು ಏಪ್ರಿಲ್ 20 ಕೊನೆಯ ದಿನವಾಗಿದೆ. ಮತದಾನವು ಮೇ 5ರಂದು ಬೆಳಿಗ್ಗೆ 7 ರಿಂದ ಸಂಜೆ 5ಗಂಟೆವರೆಗೆ ನಡೆಯಲಿದೆ. ಮೇ.8ರಂದು ಮತ ಎಣಿಕೆ ನಡೆದು, ಫಲಿತಾಂಶ ಪ್ರಕಟಗೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT